

ಪಡುಬಿದ್ರಿ: ವಿದ್ಯೆ ನಮ್ಮನ್ನು ಸ್ವತಂತ್ರವಾಗಿಸುತ್ತದೆ. ಯುವಕರು ನಾಗರಿಕ ಸೇವೆಯ ಉದ್ಯೋಗದತ್ತ ಗಮನಹರಿಸಬೇಕು ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ.ಸುಧೀರ್ ಕುಮಾರ್ ಹೇಳಿದರು.
ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆದ ಪಡುಬಿದ್ರಿ ಯುವವಾಹಿನಿ ಘಟಕ ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ, ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಣ್ಣಂಗಾರು ಶ್ರೀ ಬ್ರಹ್ಮಬೈದರ್ಕಳ ಅಧ್ಯಕ್ಷ ಶೀನ ಪೂಜಾರಿ ಉದ್ಘಾಟಿಸಿದರು. ಉದ್ಯಮಿ ಗಣೇಶ್ ಗುಜರನ್ ಮಾತನಾಡಿದರು. ಶೈಕ್ಷಣಿಕ ಸಾಧಕರಿಗೆ ಪ್ರತಿಭಾ ಪುರಸ್ಕಾರ ಹಾಗೂ 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ನೂತನ ಸದಸ್ಯರನ್ನು ಘಟಕಕ್ಕೆ ಸೇರ್ಪಡೆಗೊಳಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು. ಅಧ್ಯಕ್ಷೆ ಶಶಿಕಲಾ ಯಶೋಧರ್ ನೂತನ ಅಧ್ಯಕ್ಷ ವಿಧಿತ್ ಪೂಜಾರಿ ಮತ್ತು ಕಾರ್ಯದರ್ಶಿ ಸುಜಾತ ಪ್ರಸಾದ್, ನೂತನ ಕಾರ್ಯದರ್ಶಿ ಭಾಸ್ಕರ್ ಎನ್.ಅಂಚನ್‌ಗೆ ಅಧಿಕಾರ ಹಸ್ತಾಂತರಿಸಿದರು.
ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ದೀಪಕ್ ಕೋಟ್ಯಾನ್, ಅಶೋಕ್ ಪೂಜಾರಿ ಪಾದೆಬೆಟ್ಟು, ಡಾ.ಎನ್.ಟಿ. ಅಂಚನ್ ಉಪಸ್ಥಿತರಿದ್ದರು. ಸುರೇಶ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವತ್ಥ್ ಎಸ್. ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಚೈತ್ರಾ ಗಣೇಶ್, ಚೈತ್ರಾ ಮನೋಹರ್ ನಿರೂಪಿಸಿದರು.