ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಸಾಹಿತ್ಯ ಎನ್ನುವುದು ನಮ್ಮ ಪರಂಪರೆ, ಸಂಸ್ಕೃತಿಯ ಪ್ರತೀಕ. ಉಳ್ಳಾಲ ತಾಲೂಕಿನಲ್ಲಿ ಮೊದಲ ಬಾರಿಗೆ ನಡೆಯುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಎಲ್ಲರ ಕೂಡುವಿಕೆ ಮತ್ತು ಸಹಕಾರದೊಂದಿಗೆ ಇಡೀ ಜಿಲ್ಲೆಗೆ ವಾದರಿಯಾಗುವ ರೀತಿಯಲ್ಲಿ ಊರ ಹಬ್ಬವಾಗಿ ಆಚರಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಫೆಬ್ರವರಿ 21 ಮತ್ತು 22ರಂದು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿರುವ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿರುವ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸವಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿ ಕುಲಸಚಿವ ಕೆ.ರಾಜು ಮೊಗವೀರ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಮಾತನಾಡಿದರು. ತಹಸೀಲ್ದಾರ್ ಪುಟ್ಟರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರುದತ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್, ಕೊಣಾಜೆ ಗ್ರಾಪಂ ಅಧ್ಯಕ್ಷೆ ಗೀತಾ ಡಿ.ಕುಂದರ್, ಕಸಾಪ ಗೌರವ ಕಾರ್ಯದರ್ಶಿ ರಾಜೇಶ್ವರಿ, ತಾಲೂಕು ಕಾರ್ಯದರ್ಶಿ ರವೀಂದ್ರ ರೈ ಕಲ್ಲಿವಾರ್, ಸಂಟನಾ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ದೇರಳಕಟ್ಟೆ, ಪುಷ್ಪರಾಜ್ ಮಂಗಳೂರು, ತಾಲೂಕು ಅಧ್ಯಕ್ಷ ಮಂಜುನಾಥ್ ರೇವಣ್ಕರ್, ಹೋಬಳಿ ಅಧ್ಯಕ್ಷೆ ವಿಜಯಲಕ್ಷ್ಮೀ ರೈ, ರೇಮಂಡ್ ಡಿಕುನ್ಹಾ, ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯ ಕೊಣಾಜೆ ವಲಯ ಮೇಲ್ವಿಚಾರಕ ವಾಧವ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಗ್ಯಾರಂಟಿ ಯೋಜನೆ ಜಿಲ್ಲಾ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್, ಸಿಂಡಿಕೇಟ್ ಸದಸ್ಯ ಅಚ್ಚುತ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಸಾಪ ತಾಲೂಕು ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.