More

    ಶಿಕ್ಷಣ ಇಲಾಖೆ ಆಶ್ರಮ ಶಾಲೆಗಳ ನಿರ್ವಹಣೆ ವಹಿಸಿಕೊಳ್ಳಲಿ

    ಹುಣಸೂರು: ರಾಜ್ಯದಲ್ಲಿರುವ ಆಶ್ರಮ ಶಾಲೆಗಳ ನಿರ್ವಹಣೆಯನ್ನು ಶಿಕ್ಷಣ ಇಲಾಖೆ ವಹಿಸಿಕೊಳ್ಳುವ ಮೂಲಕ ಆದಿವಾಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಆದಿವಾಸಿ ಬುಡಕಟ್ಟು ಕೃಷಿಕರ ಸಂಘ ಮತ್ತು ಡೀಡ್ ಸಂಸ್ಥೆ ಒತ್ತಾಯಿಸಿದೆ.

    ರಾಜ್ಯದಲ್ಲಿರುವ 116ಕ್ಕೂ ಹೆಚ್ಚಿನ ಆಶ್ರಮ ಶಾಲೆಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಕ್ಕಳು 1 ರಿಂದ 7ರತನಕ ವ್ಯಾಸಂಗ ಮಾಡುತ್ತಿದ್ದಾರೆ. ಪ್ರೌಢಶಾಲೆಗೆ ಹೋಗುವ ಮೂರು ಸಾವಿರ ಮಕ್ಕಳು ಇದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ 21 ಆಶ್ರಮ ಶಾಲೆಗಳಿದ್ದು, 2 ಸಾವಿರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಆಶ್ರಮ ಶಾಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಸಂಘಟನೆಗಳ ಮುಖಂಡರು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

    ಆದಿವಾಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಏಕಲವ್ಯ, ಕಿತ್ತೂರು ರಾಣಿ ಚನ್ನಮ್ಮ ಮತ್ತು ಮುರಾರ್ಜಿ ಶಾಲೆಗಳನ್ನು ಆರಂಭಿಸಲಾಯಿತು. ಆದರೆ ಶಾಲೆಗಳ ಸ್ಥಾಪನೆಯ ಉದ್ದೇಶ ಈಡೇರುತ್ತಿಲ್ಲ. ಪ್ರತಿ ಮೂರು ಹಾಡಿಗಳಿಗೆ ಒಂದರಂತೆ 7ನೇ ತರಗತಿವರೆಗೆ ಆಶ್ರಮ ಶಾಲೆ, ಪ್ರತಿ ಪಂಚಾಯಿತಿ ಮಟ್ಟದಲ್ಲಿ ಪ್ರೌಢಶಾಲೆ ಮತ್ತು ವಸತಿ ನಿಲಯ, ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ ಪಿಯು ಕಾಲೇಜು ಮತ್ತು ಆದಿವಾಸಿ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳನ್ನು ರೂಪಿಸಿ ಶಿಕ್ಷಣ ಇಲಾಖೆ ನಿರ್ವಹಣೆ ಮಾಡಬೇಕು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇನ್ನಿತರ ಸೌಲಭ್ಯಗಳನ್ನು ನೋಡಿಕೊಳ್ಳಬೇಕು ಎಂದು ಸಂಘಟನೆಗಳ ಮುಖಂಡರಾದ ಪಿ.ಕೆ.ರಾಮು ಮತ್ತು ಡಾ.ಎಸ್.ಶ್ರೀಕಾಂತ್ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts