More

    ಪರಿಶಿಷ್ಟರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಲಿ

    ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಸರ್ವಾಂಗೀಣ ಪ್ರಗತಿಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಡಳಿತದ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

    ಡಿಸಿ ಕಚೇರಿ ಶಿರಸ್ತೇದಾರ್ ಮನು ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ ಡಿಎಸ್‌ಎಸ್ ಕಾರ್ಯಕರ್ತರು, ಸಂವಿಧಾನಕ್ಕೆ ತರಲಾಗಿರುವ 93ನೇ ತಿದ್ದುಪಡಿಯನ್ವಯ ಎಲ್ಲ ಉನ್ನತ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಾತಿ ಒದಗಿಸಬೇಕು ಎಂದು ಆಗ್ರಹಿಸಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟರು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ. ಹೀಗಾಗಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮತ್ತು ಶೋಷಿತ ಸಮುದಾಯದ ಸರ್ವಾಂಗೀಣ ಪ್ರಗತಿ ಮಾಡಬೇಕು . ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು. ಪ್ರತಿ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ಭೂಮಿ, ಅಂಬೇಡ್ಕರ್ ಭವನ ಒದಗಿಸಬೇಕು. ಮೀಸಲಾತಿಗೆ ನಿಗದಿಪಡಿಸಿರುವ ಅನುದಾನ 2.50 ಲಕ್ಷ ರೂ.ದಿಂದ ಹತ್ತು ಲಕ್ಷದವರೆಗೆ ಏರಿಸಬೇಕು. ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಜತೆಗೆ ಪೌರ ಕಾರ್ಮಿಕರನ್ನೂ ಕಾಯಂಗೊಳಿಸಬೇಕು ಎಂದು ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಪಿ.ಟಿ.ಚಂದ್ರಶೇಖರ್ ಒತ್ತಾಯಿಸಿದರು.ಖಾಸಗಿ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿ ಜಾರಿಗೊಳಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಫಾರ್ಮ್ 57ಕ್ಕೆ ಅರ್ಜಿ ಹಾಕಿರುವವರಿಗೆ ಸಾಗುವಳಿ ಚೀಟಿ, ಹಕ್ಕುಪತ್ರ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಜನಾಂಗದ ಎಲ್ಲ ಅರ್ಹರಿಗೆ ಸಾಲ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. ಪರಿಶಿಷ್ಟ ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಮಿತಿಯನ್ನು 2 ಕೋಟಿ ರೂ.ಗೆ ಏರಿಸಬೇಕು. ಜಿಲ್ಲೆಯಲ್ಲಿ ಬಲಾಢ್ಯರು ಒತ್ತುವರಿ ಮಾಡಿಕೊಂಡ ಭೂಮಿಯನ್ನು ವಶಪಡಿಸಿಕೊಂಡು ಎಲ್ಲ ವರ್ಗದ ಬಡವರಿಗೆ ಹಂಚಬೇಕು. ಚಿತ್ತುವಳ್ಳಿ ಗ್ರಾಮಸ್ಥರಿಗೆ ತಕ್ಷಣ ನಿವೇಶನ ಕೊಡಬೇಕು ಎಂದು ಒತ್ತಾಯಿಸಿದರು.ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಅಶೋಕ್ ರಾಜರತ್ನಂ, ತಾಲೂಕು ಸಂಚಾಲಕ ಎಚ್.ಕೆ.ಅಶೋಕ್, ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ರಾಜೇಶ್, ನಗರ ಸಂಚಾಲಕ ನಾಗರಾಜ್, ಸಹ ಸಂಚಾಲಕ ಎಚ್.ಎಸ್.ಪುಟ್ಟಸ್ವಾಮಿ, ಮುಖಂಡ ಟಿ.ಎಲ್.ಗಣೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts