More

    ಸರ್ಕಾರ ಅತಿಥಿ ಶಿಕ್ಷಕರ ನೆರವಿಗೆ ಧಾವಿಸಲಿ

    ಮೂಡಿಗೆರೆ: ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಅತಿಥಿ ಶಿಕ್ಷಕರು ಹೆಚ್ಚು ಶ್ರಮವಹಿಸಿ ಬೋಧನೆ ಮಾಡುತ್ತಿದ್ದಾರೆ. ಅತಿಥಿ ಶಿಕ್ಷಕರನ್ನು ಸರ್ಕಾರ ಕಾಯಂಗೊಳಿಸಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕರಡಿಗುಡ್ಡ ಹೇಳಿದರು.

    ಪಟ್ಟಣದ ಲ್ಯಾಂಪ್ಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅತಿಥಿ ಶಿಕ್ಷಕರ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿ, ಹಲವು ವರ್ಷದಿಂದ ಕಡಿಮೆ ಗೌರವಧನಕ್ಕೆ ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಈಗ ಕುಟುಂಬ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ. ಹಾಗಾಗಿ ಅತಿಥಿ ಶಿಕ್ಷಕರಿಗೆ ಉತ್ತಮ ವೇತನ ನೀಡಬೇಕು ಎಂದು ಒತ್ತಾಯಿಸಿದರು.
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಇಒ ಹೇಮಂತಚಂದ್ರ, ಅತಿಥಿ ಶಿಕ್ಷಕರರೆಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಎಲ್ಲ ಶಿಕ್ಷಕರು ಸಂಘಟನೆಯನ್ನು ಬಲಪಡಿಸಿಕೊಂಡು ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
    ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಮಂಜಪ್ಪ, ರಾಜ್ಯ ಸಂಘದ ಅಧ್ಯಕ್ಷ ಎಚ್.ಹನುಮಂತ, ಎಚ್.ಕೆ.ಲತಾ, ಆನಂದ, ಶುಭಾ, ಕೀರ್ತಿ, ಹರೀಶ್, ರವಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts