More

    ಸರ್ಕಾರದ ಯೋಜನೆ ಸದ್ಬಳಕೆಯಾಗಲಿ

    ಮದ್ದೂರು: ಹಿಂದುಳಿದ ವರ್ಗದ ವಿದ್ಯಾರ್ಥಿಗಳೂ ಉನ್ನತ ವ್ಯಾಸಂಗ ಮಾಡಬೇಕೆಂಬ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಎಂ.ಉದಯ್ ಸಲಹೆ ನೀಡಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ (ಪ್ರಥಮ ಮತ್ತು ದ್ವಿತೀಯ ಪಿಯುಸಿ) ಲ್ಯಾಪ್‌ಟಾಪ್ ಅನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.

    ಸರ್ಕಾರ ಮತ್ತು ಸಂಘ-ಸಂಸ್ಥೆಗಳು ನೀಡುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರ ಜತೆಗೆ ಕಠಿಣ ಪರಿಶ್ರಮ ಪಟ್ಟು ಓದುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಮಾನಗಳಿಸಬೇಕು. ಆ ಮೂಲಕ ಪಾಲಕರು ಮತ್ತು ಸಮಾಜಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಕಿವಿಮಾತು ಹೇಳಿದರು.

    ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಯಾವುದೇ ರೀತಿ ತೊಂದೆಯಾಗದಂತೆ ಮುಂದಿನ ದಿಗಗಳಲ್ಲಿ ವಿಶೇಷ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

    ತಹಸೀಲ್ದಾರ್ ಸೋಮಶೇಖರ್, ಕಾರ್ಮಿಕ ಅಧಿಕಾರಿ ಚೇತನ್‌ಕುಮಾರ್, ಕಾರ್ಮಿಕ ನಿರೀಕ್ಷಕರಾದ ಎಂ.ಕೃಷ್ಣ, ಜಿ.ಗಂಗಾಧರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts