ರೋಣ: ತಾಲೂಕಿನಲ್ಲಿ ಅರ್ಹರನ್ನು ಗುರುತಿಸಿ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅಧ್ಯಕ್ಷ ಮಿಥುನ ಪಾಟೀಲ ಹೇಳಿದರು.

ಪಟ್ಟಣದ ತಾಪಂ ಕರೆಯಲಾದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಪ್ರತಿ ಗ್ರಾಮ ದಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ಹೋಗಿ ಸರ್ವೆ ಮಾಡಿ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿದರ ಬಗ್ಗೆ ಪರಿಶೀಲಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯ ಸಮರ್ಪಕ ಅನುಷ್ಠಾನ್ಕಕಾಗಿ ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಅಂಗಡಿದಾರರೊಂದಿಗೆ ಸಭೆ ನಡೆಸಬೇಕು.
ತಾಪಂ ಇಒ ಚಂದ್ರಶೇಖರ ಬಿ. ಕಂದಕೂರ, ಗ್ಯಾರಂಟಿ ಸಮಿತಿ ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಇತರರಿದ್ದರು.