More

    ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದುಕೊಳ್ಳಲಿ

    ಇಂಡಿ: ಶೈಕ್ಷಣಿಕ ಕ್ಷೇತ್ರಕ್ಕೆ ಸರ್ಕಾರಗಳು ಹಲವು ಕೊಡುಗೆಗಳನ್ನು ನೀಡುತ್ತಿವೆ. ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆಯಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

    ತಾಲೂಕಿನ ಅರ್ಜುಣಗಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ 95 ಶಾಲೆಗಳನ್ನು ಉನ್ನತೀಕರಣಗೊಳಿಸಿದ್ದು, ಅದರಲ್ಲಿ ವಿಜಯಪುರ ಜಿಲ್ಲೆಯಲ್ಲಿ 5 ಶಾಲೆಗಳು ಮತ್ತು ಇಂಡಿ ತಾಲೂಕಿನ ಅರ್ಜುಣಗಿ ಶಾಲೆಯೂ ಆಗಿದೆ. ಮಕ್ಕಳಲ್ಲಿ ಕಲಿಕಾಶಕ್ತಿ ಹೆಚ್ಚಿಸಲು ಸೌಲಭ್ಯ ನೀಡುವ ದಿಸೆಯಲ್ಲಿ ಶಾಲೆಯನ್ನು ಉನ್ನತೀಕರಣಗೊಳಿಸಿದೆ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಮಾತನಾಡಿ, ಅರ್ಜುಣಗಿ ಶಾಲೆಯಲ್ಲಿ 1ರಿಂದ 8ನೇ ತರಗತಿಯವರೆಗೆ ಮಾತ್ರ ಶಿಕ್ಷಣ ನೀಡಲಾಗುತ್ತಿತ್ತು. ಶಾಸಕರ ಪ್ರಯತ್ನದಿಂದ ಈಗ ಶಾಲೆ ಉನ್ನತೀಕರಣಗೊಳಿಸಿದ್ದು, ಇಲ್ಲಿ 9 ಮತ್ತು 10ನೇ ತರಗತಿವರೆಗೆ ಬೋಧಿಸಲಾಗುತ್ತಿದೆ ಎಂದು ತಿಳಿಸಿದರು.

    ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡಗಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಳಸಾರದ ಅಭಿವನ ಪುಂಡಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.

    ಪಿ.ವೈ.ದಳವಾಯಿ, ಎಸ್‌ಡಿಎಂಸಿ ಅಧ್ಯಕ್ಷ ಮಹಾಂತೇಶ ತಾವರಖೇಡ, ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೋಮಿನ್, ಜಟ್ಟೆಪ್ಪ ರವಳಿ, ಪ್ರಶಾಂತ ಕಾಳೆ, ದಯಾನಂದ ಸಂಗೋಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts