ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಯಲಿ

blank

ಬಾಳೆಹೊನ್ನೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಎನ್.ಆರ್.ಪುರ ತಾಲೂಕು ಕಸಾಪ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ಹೇಳಿದರು.
ಮಾಗುಂಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಸಾಪ ಆಯೋಜಿಸಿದ್ದ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸಂಸ್ಕಾರ ಕಲಿತು ಕ್ರಿಯಾಶೀಲತೆ ಮೈಗೂಡಿಸಿಕೊಳ್ಳಬೇಕು. ತಮ್ಮ ಬದುಕು ಸುಂದರ ಮಾಡಿಕೊಳ್ಳುವುದರ ್ಜತೆಗೆ ಪಾಲಕರು, ಶಿಕ್ಷಕರಿಗೆ ಸಮಾಜಕ್ಕೆ ಉತ್ತಮ ಆಸ್ತಿ ಆಗಬೇಕು ಎಂದರು.
ವಿದ್ಯಾರ್ಥಿಗಳು ಹಿರಿಯರಿಗೆ ಗೌರವ ಕೊಡುವುದನ್ನು ಕಲಿತು ದುಶ್ಚಟಗಳಿಂದ ದೂರವಿರಬೇಕು. ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಪಠ್ಯೇತರ ಚಟುವಟಿಕೆಗಳಿಂದ ಮನಸ್ಸು ವಿಕಸಿತಗೊಂಡ ಉತ್ತಮ ಅನುಭವ, ಜ್ಞಾನ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದು ತಿಳಿಸಿದರು.
ಕಸಾಪ ಸದಸ್ಯ ಮಂಜೇಶ್ ಮಾತನಾಡಿ, ಮಕ್ಕಳೊಂದಿಗೆ ಉತ್ತಮ ಕ್ಷಣಗಳನ್ನು ಕಳೆಯುವುದರ ಜೊತೆಗೆ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿ ಸಮಾಜಕ್ಕೆ ನೀಡಬೇಕು ಎಂದರು. ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ತಂಡಗಳಿಗೆ ಬಹುಮಾನ ನೀಡಲಾಯಿತು.
ಮುಖ್ಯಶಿಕ್ಷಕ ರಮೇಶ್ ನಾಯಕ್ ಇತರರಿದ್ದರು.

Share This Article

ಶ್ರಾವಣ ಮಾಸದಲ್ಲಿ ಮನೆಯ ಈ ದಿಕ್ಕಿನಲ್ಲಿ ದೀಪ ಬೆಳಗಿಸಿದರೆ ಸಂಪತ್ತು, ಸಮೃದ್ಧಿ ಹೆಚ್ಚುತ್ತದೆ..! Shravan

Shravan: ಶ್ರಾವಣ ಮಾಸವು ಶಿವನಿಗೆ ಸಮರ್ಪಿತವಾದ ಮಾಸ. ಈ ತಿಂಗಳಲ್ಲಿ ಪೂಜೆ, ಉಪವಾಸ ಮತ್ತು ಧ್ಯಾನಕ್ಕೆ…

ಕುಂಬಳಕಾಯಿ ಬೀಜದ ಪ್ರಯೋಜನಗಳೇನು? ಇದು ‘ಹೃದಯ’ಕ್ಕೆ ಉತ್ತಮ, ಇಲ್ಲಿದೆ ಉಪಯುಕ್ತ ಮಾಹಿತಿ | Pumpkin Seeds

Pumpkin Seeds: ಸಾಮಾನ್ಯವಾಗಿ ಕುಂಬಳಕಾಯಿಯಲ್ಲಿ ಹಲವಾರು ರೀತಿಯ ಅಡುಗೆಗಳನ್ನು ತಯಾರಿಸಲಾಗುತ್ತದೆ. ಕೆಲವರು ಕುಂಬಳಕಾರಿ ಚಟ್ನಿ, ಸಾರು,…