More

    ವಿದ್ಯಾರ್ಥಿಗಳು ಶ್ರೇಷ್ಟ ವ್ಯಕ್ತಿಗಳ ಆದರ್ಶ ಪಾಲಿಸಲಿ

    ಸೋಮವಾರಪೇಟೆ: ವಿದ್ಯಾರ್ಥಿ ದೆಸೆಯಿಂದಲೇ ಸಮಾಜಸೇವೆಯ ಗುಣಗಳನ್ನು ರೂಢಿಸಿಕೊಂಡು ಆದರ್ಶ ವ್ಯಕ್ತಿಗಳ ಮಾರ್ಗದಲ್ಲಿ ಮುನ್ನಡೆಯಿರಿ ಎಂದು ಪ್ರಾಂಶುಪಾಲೆ ಪ್ರೊ.ಕೆ.ಎಚ್.ಧನಲಕ್ಷ್ಮೀ ಹೇಳಿದರು.

    ಯಡೂರು ಗ್ರಾಮದ ಸರ್ಕಾರಿ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅವರ ಜನ್ಮ ದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಸ್ವಾಮಿ ವಿವೇಕಾನಂದರು ಈ ದೇಶ ಕಂಡ ಅಪ್ರತಿಮ ಮೇಧಾವಿ, ವೀರ ಸನ್ಯಾಸಿ, ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಸುಧಾರಕ, ಶಿಕ್ಷಣ ತಜ್ಞ. ದೀನ-ದಲಿತರ ಸೇವೆಗೆ ಜೀವನವನ್ನು ಮುಡಿಪಾಗಿಟ್ಟ ಮಹಾನ್ ವ್ಯಕ್ತಿ. ಅಂತಹ ಶ್ರೇಷ್ಟ ವ್ಯಕ್ತಿಗಳ ಆದರ್ಶಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಂಡು ಮುನ್ನಡೆದಲ್ಲಿ ಸಮಾಜ ಸುಧಾರಣೆ ಸಾಧ್ಯವಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಎಂ.ಎಂ.ಸುನಿತಾ, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಎಸ್. ಶಿವಮೂರ್ತಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts