More

    ವಿದ್ಯಾರ್ಥಿಗಳು ಶ್ರದ್ಧೆಯಿಂದ ವ್ಯಾಸಂಗ ಮಾಡಲಿ

    • ಮಡಿಕೇರಿ : ವಿದಾರ್ಥಿ ಜೀವನವನ್ನು ಶ್ರಮ ಹಾಗೂ ಶ್ರದ್ಧೆಯಿಂದ ಬಳಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ. ಅದನ್ನು ಬಿಟ್ಟು ಮೋಜು, ಮಸ್ತಿಯಿಂದ ಕಾಲ ಕಳೆದರೆ ಜೀವನದಲ್ಲಿ ನೋವು ಅನುಭವಿಸಬೇಕಾಗುತ್ತದೆ ಎಂದು ನಟ ವೇಣೂರು ಅನೀಶ್ ಸಲಹೆ ನೀಡಿದರು.

    • ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಇತ್ತೀಚೆಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ವ್ಯಾಸಂಗ ಮಾಡುವ ಮೂಲಕ ಬದುಕನ್ನು ಸುಂದರಗೊಳಿಸಿಕೊಳ್ಳಬೇಕು ಎಂದರು.
    • ಪಿಯು ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಮಾತನಾಡಿ, ಯಾರಿಂದಲೂ ಕದಿಯಲಾಗದ ಶಾಶ್ವತ ಸಂಪತ್ತು ಎಂದರೆ ಅದು ವಿದ್ಯೆ ಮಾತ್ರ. ಹಾಗಾಗಿ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಸಲಹೆ ನೀಡಿದರು. ಸಂಸ್ಥೆಯ ಕೋಶಾಧಿಕಾರಿ ಎನ್.ಎನ್.ನಂಜಪ್ಪ, ಕಚೇರಿ ಅಧೀಕ್ಷಕ ಮಹೇಶ್ ಅಮೀನ್ ಇತರರು ಇದ್ದರು.

    03ಏ01
    ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಮಿಡಿ ಕಿಲಾಡಿ ಖ್ಯಾತಿಯ ನಟ ವೇಣೂರು ಅನೀಶ್ ಉದ್ಘಾಟಿಸಿದರು. ಕ್ಲಾರಾ ರೇಷ್ಮ, ಮಹೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts