More

    ವಿದ್ಯಾರ್ಥಿಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲಿ

    ಪಿರಿಯಾಪಟ್ಟಣ: ವಿದ್ಯಾರ್ಥಿ ಜೀವನದಲ್ಲಿ ಸಿಗುವ ಉತ್ತಮ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಲು ಪರಿಶ್ರಮ ಪಡಬೇಕು ಎಂದು ಹಾಸ್ಯ ಕಲಾವಿದ ವಿನೋದ್ ತಿಳಿಸಿದರು.

    ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬುಧವಾರ ಬಿಜಿಎಸ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಪ್ರತಿ ವಿದ್ಯಾರ್ಥಿಯಲ್ಲೂ ವಿಶೇಷ ಪ್ರತಿಭಾ ಸಾಮರ್ಥ್ಯವಿರುತ್ತದೆ. ಅದನ್ನು ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಪ್ರದರ್ಶಿಸಿದಾಗ ಯಶಸ್ಸು ಗಳಿಸಬಹುದು ಎಂದರು.

    ಚಲನಚಿತ್ರ ಸಹನಟ ಕಲಾರತಿ ಮಹದೇವ್ ಮಾತನಾಡಿ, ವಿದ್ಯಾರ್ಥಿ ಜೀವನಕ್ಕೆ ನಮ್ಮ ಜೀವನದ ದಿಕ್ಕು ಬದಲಿಸುವ ಶಕ್ತಿ ಹೊಂದಿದೆ ಎಂದರು.

    ಎಸ್ ಕೆಎಸ್ ಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಉಪಪ್ರಾಂಶುಪಾಲ ಮಹದೇವ್, ಬಿಜಿಎಸ್ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಹೆಚ್.ಎನ್.ಸುಧಾಕರ್ ಮಾತನಾಡಿದರು. ಬಳಿಕ ಹಾಸ್ಯ ಕಲಾವಿದ ವಿನೋದ್ ಹಾಗೂ ಸಹನಟ ಕಲಾರತಿ ಮಹದೇವ್ ಅವರು ಸಾಮಾಜಿಕ ಸಂದೇಶ ಸಾರುವ ಗೀತೆಗಳನ್ನು ಹಾಡಿ ಹಾಸ್ಯದ ಮೂಲಕ ಎಲ್ಲರನ್ನೂ ರಂಜಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು.

    ವಿವಿಧ ಶಾಲೆಗಳ ಮುಖ್ಯ ಶಿಕ್ಷಕರಾದ ಶ್ರೀನಿವಾಸ್, ಪ್ರಭಾಕರ್ ಸಿಂಗ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್.ಸತೀಶ್ ಆರಾಧ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನವೀನ್ ಕುಮಾರ್, ಬಿಜಿಎಸ್ ವಿದ್ಯಾಸಂಸ್ಥೆಯ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಗೋವಿಂದೇಗೌಡ, ಕೆ.ಆರ್.ಪ್ರವೀಣ್, ಮುಖ್ಯ ಶಿಕ್ಷಕಿ ದಿವ್ಯಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts