More

    ಮಕ್ಕಳ ಪ್ರತಿಭೆ ಪ್ರೋತ್ಸಾಹಿಸುವ ಕಾರ್ಯವಾಗಲಿ

    ಕುಂದಗೋಳ: ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕು ಎಂದು ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು.

    ಪಟ್ಟಣದ ಸನ್​ಸೈನ್ ಶಿಕ್ಷಣ ಸಂಸ್ಥೆಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಪಟ್ಟಣದಲ್ಲಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯು ಕಳೆದ 19 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಉತ್ತಮ ಆಡಳಿತ ಮಂಡಳಿ ಹಾಗೂ ಶಿಕ್ಷಕರನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಹೆಮ್ಮರವಾಗಿ ಬೆಳೆದು ಸನ್​ಸೈನ್ ಉತ್ಸವ ನಡೆಯುವಂತಾಗಲಿ ಎಂದು ಹಾರೈಸಿದರು.

    ಸನ್​ಸೈನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೊಪ್ಪದ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳಬೇಕು ಎಂದರು.

    ಪಟ್ಟಣದ ಮಲ್ಲಪ್ಪ ಕೊಪ್ಪದ, ದೇವನೂರು ಗ್ರಾಮದ ನೀಲಪ್ಪ ಬಟ್ಟೂರ ಹಾಗೂ ಬಿಳೇಬಾಳ ಗ್ರಾಮದ ಮಲ್ಲಪ್ಪ ತಡಸದ ಅವರಿಗೆ ಶಿಕ್ಷಣ ಸಂಸ್ಥೆಯಿಂದ ನೇಗಿಲಯೋಗಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

    ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪಿ.ಎಂ. ಕಾಳಿ ಮಾತನಾಡಿದರು. ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಆರ್.ಎಸ್. ಮಂತ್ರಶೆಟ್ಟಿ, ಖಜಾಂಚಿ ಬಿ.ಟಿ. ಬಾಳಿಕಾಯಿ, ನಿರ್ದೇಶಕರಾದ ಬಿ.ಟಿ. ಗಂಗಾಯಿ, ಎಸ್.ಎಸ್. ಗಂಗಾಯಿ, ಉಮೇಶ ಬಿಡನಾಳ, ರವಿಗೌಡ ಪಾಟೀಲ, ಉಮೇಶ ಹೆಬಸೂರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts