More

    ವಿಧಾನ ಪರಿಷತ್‌ಗೆ ಶಿಕ್ಷಕರೇ ಸ್ಪರ್ಧಿಸಲಿ

    ಶಿವಮೊಗ್ಗ: ವಿಧಾನ ಪರಿಷತ್‌ಗೆ ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕರೇ ಸ್ಪರ್ಧೆ ಮಾಡುವುದು ಸೂಕ್ತ. ಆಗ ಮಾತ್ರ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಹೀಗಾಗಿ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಅರುಣ್ ಹೊಸಕೊಪ್ಪ ಹೇಳಿದರು.

    ನಾನು ಹಲವು ವರ್ಷ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ್ದೇನೆ. ಪ್ರಾಧ್ಯಾಪಕನಾಗಿಯೂ ಕೆಲಸ ಮಾಡಿದ್ದೇನೆ. 2012 ಹಾಗೂ 18ರ ಚುನಾವಣೆಯಲ್ಲಿ ಬಹಳಷ್ಟು ಮತಗಳನ್ನು ಪಡೆದಿದ್ದೆ. ಈಗ ಮತ್ತೊಮ್ಮೆ ಸ್ಪರ್ಧೆಗೆ ನಿರ್ಧರಿಸಿದ್ದೇನೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಬಹಳ ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ನಾನು ಆಯ್ಕೆಯಾದರೆ ಇದಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಅನುದಾನಿತ ಶಿಕ್ಷಕರ ಸಮಸ್ಯೆಗಳು ಹೆಚ್ಚಿವೆ. ಅವರು ನಿವೃತ್ತರಾದ ಬಳಿಕ ಪಿಂಚಣಿಯೂ ದೊರೆಯುವುದಿಲ್ಲ. ಈ ಸಮಸ್ಯೆಗೆ ಮುಕ್ತಿ ಹಾಡಬೇಕಿದೆ ಎಂದರು.
    ನೈಋತ್ಯ ಶಿಕ್ಷಕರ ಕ್ಷೇತ್ರದ ಆರು ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಬಹುತೇಕ ಮತದಾರರನ್ನು ತಲುಪಿದ್ದೇನೆ. ಇದುವರೆಗೂ ಶಿಕ್ಷಕರಲ್ಲದವರು ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಈ ಪರಿಪಾಠ ನಿಲ್ಲಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts