More

    ರಾಸಾಯನಿಕಮುಕ್ತವಾಗಿರಲಿ ತರಕಾರಿ

    ತರೀಕೆರೆ: ಆಧುನಿಕ ಕೃಷಿಯಲ್ಲಿ ಬಳಸುತ್ತಿರುವ ರಾಸಾಯನಿಕ ಆರೋಗ್ಯಕ್ಕೆ ಕಂಟಕವಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷ ಹೇಮಶೇಖರ್ ಹೇಳಿದರು.

    ನೇರಲಕೆರೆ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಹಾಗೂ ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವ ವಿದ್ಯಾಲಯದ ಸಹಯೋಗದಲ್ಲಿ ಮಹಿಳಾ ಜ್ಞಾನ ವಿಕಾಸ ಸೃಜನಶೀಲ ಕಾರ್ಯಕ್ರಮದಡಿ ಏರ್ಪಡಿಸಿದ್ದ ಕೈತೋಟ ರಚನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಕೈ ತೋಟಗಳಲ್ಲಿ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆಸುವ ತರಕಾರಿ ಮೂರು ತಿಂಗಳಲ್ಲಿ ಕೈ ಸೇರಲಿದ್ದು, ಇದು ಮನೆ ಅಡುಗೆಗೆ ಉಪಯುಕ್ತವಾಗಲಿದೆ. ಸೃಜನಶೀಲತೆಗಾಗಿ ಆಯೋಜಿಸಿರುವ ಕಾರ್ಯಕ್ರಮ ಪ್ರಯೋಜನಕಾರಿಯಾಗಬೇಕು. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಕೈ ತೋಟದಲ್ಲಿ ಮನೆಗೆ ಬೇಕಾದಷ್ಟು ತರಕಾರಿ ಬೆಳೆದು ಉಪಯೋಗಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
    ಸಂಪನ್ಮೂಲ ವ್ಯಕ್ತಿ ಡಾ. ಸದಾಶಿವ ನಡುಕೆರಿ ಮಾತನಾಡಿ, ಕೈ ತೋಟವಷ್ಟೇ ಅಲ್ಲ, ಮನೆ ಛಾವಣಿ ಮೇಲೆ, ಕೊಟ್ಟಿಗೆ ಮತ್ತು ಎರೆಹುಳ ಗೊಬ್ಬರ ಬಳಸಿ ಬೆಳೆಸುವ ತರಕಾರಿ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.
    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಸಂತೋಷ್, ಕೃಷಿ ಅಧಿಕಾರಿ ಕರಿಯಪ್ಪ, ಪಿಡಿಒ ಮಲ್ಲಿಕಾರ್ಜುನ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಂದಿನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts