More

    ಸಂವಿಧಾನದ ಆಶಯಗಳು ಮನೆ ಮಾತಾಗಲಿ

    ಬಳ್ಳಾರಿ : ಸಂವಿಧಾನ ಓದು ಕಾರ್ಯಕ್ರಮವು ನೈಜ ಸ್ವರೂಪ ಪಡೆದು ಇಂದು ರಾಷ್ಟ್ರದ ಮತ್ತು ರಾಜ್ಯದ ಮನೆಮಾತಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ.ಭಾಸ್ಕರ್ ಹೇಳಿದರು.

    ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸಂವಿಧಾನ ಓದು’ ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ಸಂವಿಧಾನ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸಿದರೆ ಸಮ ಸಮಾಜ ನಿರ್ಮಾಣ ಸಾಧ್ಯ.ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು ಎಂದು ತಿಳಿಸಿದರು.

    ವಿವಿ ಕುಲಪತಿ ಪ್ರೊ.ಸಾಹೇಬ್ ಅಲಿ ನಿರಗುಡಿ ಮಾತನಾಡಿ, ಸಂವಿಧಾನ ಎಂದರೆ ಹಕ್ಕುಗಳು, ಕರ್ತವ್ಯಗಳು, ತತ್ವಗಳು ಮತ್ತು ಕಾನೂನಿನ ಮೂಲಕ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವ ಪವಿತ್ರ ಗ್ರಂಥವಾಗಿದೆ. ನನ್ನ ಜೀವನಕ್ಕೆ ಸಂವಿಧಾನವು ದಾರಿ ದೀಪವಾಗಿದೆ ಎಂದು ಹೇಳಿದರು.

    ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್ ಎಸ್.ಎನ್ ಮಾತನಾಡಿ, ಸಂವಿಧಾನ ಮಹತ್ವ ತಿಳಿದುಕೊಂಡರೆ ಮಾತ್ರ ಭವ್ಯವಾದ ರಾಜ್ಯ ನಿರ್ಮಿಸಲು ಸಾಧ್ಯ. ಸಂವಿಧಾನ ರಚನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಸಂಪೂರ್ಣವಾಗಿ ತಲ್ಲಿನರಾಗಿ ರಕ್ತಪಾತವಿಲ್ಲದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಳನ್ನು ತರುವ ವ್ಯವಸ್ಥೆಯನ್ನು ನಿರ್ಮಾಣ ಮಾಡಿದ್ದರೆ. ಇಂಥ ಮಹತ್ವದ ದಿನದ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ, ಸಾಮರಸ್ಯ ಹಾಗೂ ಸಮಾನತೆಯ ಕುರಿತು ಅರಿತುಕೊಳ್ಳುವುದು ಅತಿಮುಖ್ಯ ಎಂದು ತಿಳಿಸಿದರು.

    ವಿವಿಯ ಕುಲಸಚಿವ(ಮೌಲ್ಯಮಾಪನ) ಪ್ರೊ. ರಮೇಶ್ ಓಲೇಕಾರ್ ಸಂವಿಧಾನ ಪೀಠಿಕೆ ಬೋಧಿಸಿದರು. ಡಾ.ಮಲ್ಲಿಕಾರ್ಜುನ ಮಾನ್ಪಡೆ, ಪ್ರೊ.ಸಿ.ಟಿ ಗುರುಪ್ರಸಾದ್, ವೈ.ಎಂ.ಉಪ್ಪಿನ, ಪ್ರೊ. ಸದ್ಯೋಜಾತಪ್ಪ, ಡಾ. ಕುಮಾರ್ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts