

ಪಡುಬಿದ್ರಿ: ವಿಶ್ವ ಭೂಪಟದಲ್ಲಿ ಬೆಂಗಳೂರು ಗುರುತಿಸಿಕೊಳ್ಳಲು ಕಾರಣಕರ್ತರಾದ ಕೆಂಪೇಗೌಡ ಸ್ಮರಣೆ ಅತ್ಯಗತ್ಯ. ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ವಾದರಿಯಾಗಿರಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಪ್ರತಿಭಾ ಆರ್. ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಾಪು ತಾಲೂಕು ಆಡಳಿತ ಸಂಯುಕ್ತವಾಗಿ ಕಾಪು ಪ್ರಜಾಸೌಧ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಬಂಧ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುವಾನ ವಿತರಿಸಲಾಯಿತು. ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅದವಾರು ಪದವಿ ಪೂರ್ವ ಕಾಲೇಜಿನ ಬೇಬಿ ಜೈನ್, ಮಹಾದೇವಿ ಪ್ರೌಢಶಾಲೆ ವಿದ್ಯಾರ್ಥಿ ಪ್ರಜ್ವಲ್ ಕೆಂಪೇಗೌಡರ ಕುರಿತು ಭಾಷಣ ವಾಡಿದರು.
ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ಕುವಾರ್, ಪುರಸಭೆ ಸದಸ್ಯರಾದ ಶೈಲೇಶ್ ಅಮೀನ್, ನೂರುದ್ದೀನ್, ಫರ್ಜಾನ ಸಂಜಯ್, ರಾಧಿಕಾ, ಶಾಂತಲತಾ ಶೆಟ್ಟಿ, ಶೋಭಾ ಬಂಗೇರ, ಮುಖ್ಯಾಧಿಕಾರಿ ನಾಗರಾಜ ಸಿ., ದಂಡತೀರ್ಥ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನೀಲಾನಂದ ನಾಯ್ಕ ಉಪಸ್ಥಿತರಿದ್ದರು.
ಗ್ರಾಮ ಆಡಳಿತ ಅಧಿಕಾರಿ ಲೋಕನಾಥ ಲವಾಣಿ ಸ್ವಾಗತಿಸಿದರು. ಉಪ ತಹಸೀಲ್ದಾರ್ ದೇವಕಿ ವಂದಿಸಿದರು. ಗ್ರೆಟ್ಟಾ ಮೊರಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಿಚರಣ್ ನಿರೂಪಿಸಿದರು.