ಯುವಜನತೆಯಲ್ಲಿರಲಿ ರಕ್ತದಾನ ಆಸಕ್ತಿ : ಕುಂದಾಪುರ ರೆಡ್‌ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ ಸಲಹೆ

blood
ರಕ್ತದಾನ ಶಿಬಿರವನ್ನು ಕುಂದಾಪುರ ರೆಡ್‌ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ ಉದ್ಘಾಟಿಸಿದರು
Published on

ಉಡುಪಿ: ದಾನವಾಗಿ ಲಭಿಸುವ ರಕ್ತವನ್ನು ಮೂರು ವರ್ಗಗಳಾಗಿ ವಿಂಗಡಿಸಿ ತುರ್ತು ಸಂದರ್ಭ ಬಳಕೆ ಮಾಡಲಾಗುತ್ತದೆ. ಮೂರು ಜೀವಗಳನ್ನು ಕಾಪಾಡಲು ಸಹಕಾರಿಯಾಗುತ್ತದೆ. ಆದ್ದರಿಂದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ವಾಡಿ ವಾನವೀಯತೆ ಮೆರೆಯಬೇಕು ಎಂದು ಕುಂದಾಪುರ ರೆಡ್‌ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ ಹೇಳಿದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯುಎಸಿ, ಯೂತ್ ರೆಡ್‌ಕ್ರಾಸ್, ರೋವರ್ಸ್‌ ರೇಂಜರ್ಸ್‌, ಎನ್‌ಎಸ್‌ಎಸ್ ಹಾಗೂ ರೆಡ್‌ಕ್ರಾಸ್ ಸೊಸೈಟಿ, ಟಾರ್ಗೆಟ್ ಫ್ರೆಂಡ್ಸ್, ಮಲ್ಪೆ-ಮಣಿಪಾಲ ಆಶ್ರಯದಲ್ಲಿ ಸೋಮವಾರ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರೆಡ್‌ಕ್ರಾಸ್ ಸೊಸೈಟಿ ಉಡುಪಿ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಗೌರವ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ಎಚ್‌ಡಿಎಫ್‌ಸಿ ವ್ಯಾನೇಜರ್ ರಾವೇಂದ್ರ ರಾವ್ ರಕ್ತದಾನದ ಮಹತ್ವ ಕುರಿತು ಮಾಹಿತಿ ನೀಡಿದರು. ಪ್ರಭಾರ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷೆ ಗೀತಾ ವಾದಿರಾಜ್, ಐಕ್ಯುಎಸಿ ಸಂಚಾಲಕ ಡಾ.ಮೇವಿ ಮಿರಾಂದ, ಟಾರ್ಗೆಟ್ ಫ್ರೆಂಡ್ಸ್ ಮಲ್ಪೆಯ ಮುನಾವರ್ ಕೆ. ಉಪಸ್ಥಿತರಿದ್ದರು. ರೋವರ್ಸ್‌ ಸಂಚಾಲಕ ಡಾ.ಉದಯ ಶೆಟ್ಟಿ ಕೆ. ಸ್ವಾಗತಿಸಿದರು. ಯೂತ್‌ರೆಡ್‌ಕ್ರಾಸ್ ಸಂಚಾಲಕ ಪ್ರಶಾಂತ್ ನೀಲಾವರ ವಂದಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ರು ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net