More

    ಮಲೇರಿಯಾ ನಿಯಂತ್ರಣಕ್ಕೆ ಯುವಸಮೂಹ ಶ್ರಮಿಸಲಿ

    ಶ್ರೀರಂಗಪಟ್ಟಣ: ಮಲೇರಿಯಾದಂತಹ ರೋಗಗಳ ನಿಯಂತ್ರಣಕ್ಕೆ ಯುವಸಮೂಹ ಪರಿಣಾಮಕಾರಿಯಾಗಿ ಶ್ರಮಿಸಬೇಕಾದ ಅಗತ್ಯತೆ ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ಟಿ.ಮಂಜುನಾಥ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಮಲೇರಿಯಾ ವಿರುದ್ಧದ ಹೋರಾಟವನ್ನು ವೇಗಗೊಳಿಸೋಣ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತಿದೆ ಎಂದರು.
    ರೋಗವಾಹಕ ಆಶ್ರಿತ ರೋಗಗಳಾದ ಮಲೇರಿಯಾ, ಡೆಂೆ ಜ್ವರ, ಚಿಕೂನ್ ಗುನ್ಯ, ಮೆದುಳು ಜ್ವರ, ಅನಾಫಿಲಿಸ್, ಈಡಿಸ್ ಹಾಗೂ ಕ್ಯೂಲೆಕ್ಸ್ ಸೊಳ್ಳೆಗಳ ಜೀವನ ಚಕ್ರ ಹಾಗೂ ನಿಯಂತ್ರಣ ವಿಧಾನಗಳ ಕುರಿತು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಉಪನ್ಯಾಸ ನೀಡಿದರು.

    ಕಾಲೇಜು ಪ್ರಾಂಶುಪಾಲ ಕೆ.ಎಂ.ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಕಿರಿಯ ತರಬೇತಿ ಅಧಿಕಾರಿ ಎಸ್.ಶಿವಕುಮಾರ್, ಕೆ.ಎಂ. ಇಂದಿರಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಿ.ಮೋಹನ್, ರಾಜ, ಜಿ.ಬಿ.ಹೇಮಣ್ಣ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ್, ಎಂ.ಎನ್.ಕೃಷ್ಣೇಗೌಡ, ಆಶಾ ಕಾರ್ಯಕರ್ತೆ ಅಶ್ವಿನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts