ಸ್ವಂತ ಪರಿಶ್ರಮದಿಂದ ವ್ಯಕ್ತಿತ್ವ ರೂಪಿಸಿಕೊಳ್ಳಲಿ

gan (7)
Published on

ಕುಂದಾಪುರ: ಬದುಕಿನಲ್ಲಿ ಸುಖ-ದುಃಖ, ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಭರವಸೆಯಾದ ಯುವಶಕ್ತಿ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಆರೋಗ್ಯಯುತ ಜೀವನ ಶೈಲಿ ಪಾಲಿಸಿ ಸ್ವಂತ ಪರಿಶ್ರಮದಿಂದ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಮನಃಶಾಸ್ತ್ರಜ್ಞ ಡಾ.ವಿರೂಪಾಕ್ಷ ದೇವರುಮನೆ ಹೇಳಿದರು.

ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿ ವೇದಿಕೆ ಉದ್ಘಾಟಿಸಿ ವಾತನಾಡಿದರು.

ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಂಪತ್ ಕುವಾರ್ ಶೆಟ್ಟಿ, ರಕ್ಷಕ-ಶಿಕ್ಷಕ ಸಂ ಅಧ್ಯಕ್ಷ ಪ್ರಭಾಕರ ಖಾರ್ವಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ವೇದಿಕೆ ಅಧ್ಯಕ್ಷರಾಗಿ ಸಿ.ವಿ.ಕೃತಿಕ್, ಉಪಾಧ್ಯಕ್ಷರಾಗಿ ಪ್ರದೀಪ್ ಮತ್ತು ದುರ್ಗಾಶ್ರೀ, ಕಾರ್ಯದರ್ಶಿಯಾಗಿ ಪುನೀತ್, ಜತೆ ಕಾರ್ಯದರ್ಶಿಯಾಗಿ ದೀಕ್ಷಾ, ಪ್ರತಿನಿಧಿಯಾಗಿ ನಿಶಾ ಆಯ್ಕೆಯಾದರು.

ನಾಗರಾಜ ವೈದ್ಯ ಎಂ. ಸ್ವಾಗತಿಸಿದರು. ಕೃತಿಕ್ ವಂದಿಸಿದರು. ನಾಗರಾಜ ಯು. ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾ ಶೇಟ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net