ನೀಟ್ ಅಕ್ರಮ ನಿಷ್ಪಕ್ಷಪಾತ ತನಿಖೆಯಾಗಲಿ : ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರವ ಬಲ್ಲಾಳ್ ಆಗ್ರಹ

NSUI
ನೀಟ್ ಅಕ್ರಮಗಳ ವಿರುದ್ಧ ಎನ್‌ಎಸ್‌ಯುಐ ನೇತೃತ್ವದಲ್ಲಿ ಕುಂದಾಪುರದಲ್ಲಿ ಎನ್‌ಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
Published on

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ನೀಟ್ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ. ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುವ ಕೇಂದ್ರ ಸರ್ಕಾರದ ಪ್ರಾಯೋಜಿತ ಭ್ರಷ್ಟಾಚಾರ. ಈ ಅಕ್ರಮಗಳ ಬಗ್ಗೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರವ ಬಲ್ಲಾಳ್ ಆಗ್ರಹಿಸಿದರು.

ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಸೋಮವಾರ ಎನ್‌ಎಸ್‌ಯುಐ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಮಾತನಾಡಿದರು. ಮೊಳಹಳ್ಳಿ ದಿನೇಶ್ ಹೆಗ್ಡೆ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕುಂದಾಪುರ ಬ್ಲಾಕ್ ಎನ್‌ಎನ್‌ಯುಐ ಅಧ್ಯಕ್ಷ ಸುಜನ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಜಿಲ್ಲಾ ವಕ್ತಾರ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ, ರೋಶನ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಪ್ರಭಾವತಿ, ಶ್ರೀಧರ ಶೇರಿಗಾರ್, ಆಶಾ ಕರ್ವಾಲೊ, ಸೌಮ್ಯಾ ಮೊಗವೀರ, ಹಾರೂನ್ ಸಾಹೇಬ್, ಮುನಾಫ್ ಕೋಡಿ, ಚಂದ್ರ ಅಮೀನ್, ನಾರಾಯಣ ಆಚಾರ್, ಕುಮಾರ ಖಾರ್ವಿ, ಅಭಿಜಿತ್ ಪೂಜಾರಿ, ಗಣೇಶ್ ಶೇರಿಗಾರ್, ಶೋಭಾ ಸಚ್ಚಿದಾನಂದ, ಅಶೋಕ್ ಸುವರ್ಣ, ಹಾರೋನ್ ಸಾಹೆಬ್, ಜ್ಯೋತಿ ನಾಯ್ಕ, ವಿದ್ಯಾಧರ ಪೂಜಾರಿ, ಸುನೀಲ್ ಪೂಜಾರಿ, ಕೇಶವ್ ಭಟ್, ಅಬ್ದುಲ್ ಸಾಹೇಬ್, ಸಂತೋಷ್ ಪೂಜಾರಿ, ದಿನೇಶ್ ಬೆಟ್ಟ, ಲಕ್ಷ್ಮಣ ಬರೆಕಟ್ಟು, ಚಂದ್ರಕಾಂತ ಖಾರ್ವಿ, ರಾಕೇಶ್ ಶೆಟ್ಟಿ, ರಘುರಾಂ ನಾಯ್ಕ, ವೇಲಾ ಬ್ರಗಾಂಜ, ಮೇಬಲ್ ಡಿಸೋಜ, ಡೊಲ್ಫಿ ಡಿಕೋಸ್ತ, ವೇಣು ಗೋಪಾಲ ಮತ್ತಿತರರು ಪಾಲ್ಗೊಂಡಿದ್ದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net