More

    ನೀರಿನ ಸಮಸ್ಯೆ ಎದುರಾಗದಿರಲಿ

    ಗುಂಡ್ಲುಪೇಟೆ: ಮುಂಬರುವ ದಿನಗಳಲ್ಲಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಕ್ರಮ ಕೈಗೊಳ್ಳಿ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸೂಚನೆ ನೀಡಿದರು.

    ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಿವಿಧ ಯೋಜನೆಗಳಡಿಯ ಕಾಮಗಾರಿಗಳ ಕ್ರಿಯಾ ಯೋಜನೆ ಸಭೆಯಲ್ಲಿ ಮಾತನಾಡಿದರು.

    ಪಟ್ಟಣಕ್ಕೆ ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ಬಹುಗ್ರಾಮ ಯೋಜನೆಯಡಿ ಕಬಿನಿಯಿಂದ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಬೇಸಿಗೆಯ ಆರಂಭದಲ್ಲಿಯೇ ಇನ್ನೂ ಕೆಲವು ಗ್ರಾಮಗಳಲ್ಲಿ ಸಮಸ್ಯೆ ಉದ್ಭವಿಸಿರುವ ಬಗ್ಗೆ ಮಾಹಿತಿಯಿದೆ. ಆದ್ದರಿಂದ ಸಂಬಂಧಿಸಿದ ಇಲಾಖೆಯವರು ಕೂಡಲೇ ಅಂತಹ ಗ್ರಾಮಗಳಿಗೆ ಸಮರ್ಪಕ ನೀರು ಪೂರೈಕೆಗೆ ಅನುಕೂಲ ಆಗುವಂತೆ ಪೈಪ್ ಲೈನ್ ನಿರ್ಮಾಣ ಹಾಗೂ ಕೊಳವೆಬಾವಿ ಕೊರೆಯಿಸಲು ಜನ, ಜಾನುವಾರುಗಳಿಗೆ ನೀರು ಹಾಗೂ ಮೇವಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ವಿ.ಮಧುಸೂಧನ್ ಮಾತನಾಡಿ, ಹಂಗಳ, ಹಂಗಳಪುರ, ಎಲ್ಚೆಟ್ಟಿ, ಕೆಲಸೂರು, ಶೀಲವಂತಪುರ, ಶಿವಪುರ, ಹೊನ್ನೇಗೌಡನಹಳ್ಳಿ, ಬೇರಂಬಾಡಿ ಕಾಲನಿ, ಕಣಿಯನಪುರ, ಮುಕ್ತಿ ಕಾಲನಿ ಹಾಗೂ ಶೆಟ್ಟಹಳ್ಳಿ ಗ್ರಾಮಗಳಲ್ಲಿ ತಲಾ 1.5 ಲಕ್ಷ ರೂ. ವೆಚ್ಚದಲ್ಲಿ ಕೊಳವೆ ಬಾವಿ ಕೊರೆಯಿಸಿ ಪೈಪ್‌ಲೈನ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.

    ಪಶುವೈದ್ಯ ಇಲಾಖೆ ಡಾ.ಮೋಹನ್ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಇನ್ನೂ ನಾಲ್ಕು ತಿಂಗಳಿಗೆ ಸಾಕಾಗುವಷ್ಟು ಮೇವಿನ ಸಂಗ್ರಹವಿರುವುದಾಗಿ ಮಾಹಿತಿ ನೀಡಿದರು.

    ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ರಾಮಲಿಂಗಯ್ಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಭಾಸ್ಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts