More

    ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗದಿರಲಿ

    ಶಿರಹಟ್ಟಿ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಯಾವ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಾಪಂ ಇಒ ಡಾ. ಎನ್.ಎಚ್. ಓಲೇಕಾರ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕೆ. ಮಲ್ಲಿಕಾರ್ಜುನ ಅವರಿಗೆ ಸೂಚನೆ ನೀಡಿದರು.

    ಶಿರಹಟ್ಟಿ ತಾಪಂ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಎಸ್​ಸಿಪಿ, ಟಿಎಸ್​ಪಿ ಯೋಜನೆ (ವಿಶೇಷ ಘಟಕ ಯೋಜನೆ/ ಗಿರಿಜನ ಉಪ ಯೋಜನೆ) ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಈ ಸಭೆ ಜರುಗಿಸುವ ಸಂಬಂಧ 20 ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಪತ್ರ ಕಳಿಸಲಾಗಿದೆ. ಮುಖ್ಯವಾಗಿ ಪಿಎಂಜಿಎಸ್​ವೈ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೈಮಗ್ಗ ಜವಳಿ, ಕಾರ್ವಿುಕ ಇಲಾಖೆ ಅಧಿಕಾರಿಗಳು ಗೈರಾಗಿದ್ದು, ಅವರ ಮೇಲೆ ಶಿಸ್ತು ಕ್ರಮಕ್ಕೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ ಎಂದರು.

    ಸರ್ಕಾರದ ಅನುದಾನ, ಸಮುದಾಯದ (ವಂತಿಗೆ) ಸಹಭಾಗಿತ್ವದೊಂದಿಗೆ ಜಾರಿಗೆ ಬಂದ ಜಲಜೀವನ ಮಿಷನ್ ಅನುಷ್ಠಾನ ವೇಳೆ ಆಯಾ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಕಾರ್ಯಕ್ಕೆ ಚಾಲನೆ ನೀಡಿ. ಇಲ್ಲವಾದರೆ ಅನಗತ್ಯ ದೂರುವಂತಾಗಬಾರದು ಎಂದು ತಾಪಂ ಇಒ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಡಿಬಿಒಟಿ ಯೋಜನೆಯಡಿ ಕೆಲ ಹಳ್ಳಿಗಳಿಗೆ ನದಿ ನೀರು

    ಸಮರ್ಪಕವಾಗಿ ತಲುಪುತ್ತಿಲ್ಲ. ಇದಕ್ಕೆ ಬನ್ನಿಕೊಪ್ಪ ಮತ್ತು ಸುಗ್ನಳ್ಳಿ ಗ್ರಾಮಗಳೇ ಸಾಕ್ಷಿಯಾಗಿದ್ದು ಈ ಬಗ್ಗೆ ಗ್ರಾಪಂ ಅಧ್ಯಕ್ಷ ಜಿ.ಪಂ. ಸಿಇಒ ಅವರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜನರಿಗೆ ಶುದ್ಧ ನೀರು ಒದಗಿಸುವ ಜಲಜೀವನ ಮಿಷನ್ ಕಾಮಗಾರಿ ತ್ವರಿತಗತಿಯಲ್ಲಿ ಆರಂಭಿಸಿ ಎಂದು ಹೇಳಿದರು.

    ಜಿಪಂ ಇಂಜಿನಿಯರಿಂಗ್ ಉಪ ವಿಭಾಗದಿಂದ ವಿವಿಧ ಗ್ರಾಮದ ಎಸ್ಸಿ, ಎಸ್ಟಿ ಕಾಲನಿಗಳಲ್ಲಿ ಸಮುದಾಯ ಭವನಗಳ ನಿರ್ವಹಣೆ, ಹೈಮಾಸ್ಟ್ ದೀಪಗಳ ಜೋಡಣೆ ಕೆಲಸವನ್ನು ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಲಾಯಿತು.

    ಎಸ್​ಸಿಪಿ, ಟಿಎಸ್​ಪಿ ಯೋಜನೆ ಅನುಷ್ಠಾನ ಆಯಾ ಜನಾಂಗದ ಕಾಲನಿಗಳಲ್ಲಿ ಕೈಗೆತ್ತಿಕೊಳ್ಳಬೇಕು. ಕಾಮಗಾರಿ ಅನುದಾನ ಬೇರೆಡೆ ಬಳಸುವುದಾದರೆ ತಾಪಂ ಸಭೆಯಲ್ಲಿ ಸದಸ್ಯರ ಅನುಮತಿ ಪಡೆದ ನಂತರ ಆರಂಭಿಸಿ ಎಂದು ತಾಪಂ ಇಒ ಡಾ. ಎನ್.ಎಚ್. ಓಲೇಕಾರ ಹೇಳಿದರು.

    ತಾಪಂ ಉಪಾಧ್ಯಕ್ಷೆ ಪವಿತ್ರಾ ಶಂಕಿನದಾಸರ, ಸಮಾಜ ಕಲ್ಯಾಣ ಅಧಿಕಾರಿ ಎಸ್.ಬಿ. ಹರ್ತಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts