More

    ಬಾಬಾಬುಡನ್ ದತ್ತ ಪೀಠದಲ್ಲಿ ಶಾಂತಿ,ಸೌಹಾರ್ದತೆ ನೆಲೆಸಲಿ

    ಚಿಕ್ಕಮಗಳೂರು: ಬಾಬಾಬುಡನ್ ದತ್ತ ಪೀಠದಲ್ಲಿ ಶಾಂತಿ ಮತ್ತು ಸೌಹಾದರ್ತೆ ಸಂಕೇತವಾಗಿ ಚಿಕ್ಕಮಗಳೂರಿನ ಮುಸ್ಲಿಂ ಸಮುದಾಯದವರಯ ಗ್ಯಾರವಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.
    ರಾಜ್ಯ ಹಜರತ್ ಟಿಪ್ಪೂ ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.
    ಬೆಳಗ್ಗೆ 11ಗಂಟೆಗೆ ಆರಂಭವಾದ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ನಗರದ ಫಕೀರರು ಪ್ರಾರ್ಥನೆ ಸಲ್ಲಿಸಿದರು. ವಿವಿಧ ಮಸೀದಿಗಳ ಗುರುಗಳು ಸೇರಿದಂತೆ ಬಳ್ಳಾರಿಯಿಂದ ಆಗಮಿಸಿದ್ದ ಮುಫ್ತಿ ಸೌಫಿ ಮೌಲಾನ ಇರ್ಷಾದ್ ಗುರುಗಳ ಸಮ್ಮುಖದಲ್ಲಿ ಗಿರಿಯಲ್ಲಿರುವ ಗುಹೆಯೊಳಗೆ ಹೂವುಗಳನ್ನು ಸಮರ್ಪಿಸಿ, ದೇಶದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥನೆ ಮಾಡಲಾಯಿತು.
    ಗಿರಿ ಪ್ರದೇಶದಲ್ಲಿರುವ ಕೆಲವು ಕಾಫಿ ಬೆಳೆಗಾರರು ತಾವು ತಂದ ಕಾಫಿ ಬೀಜಗಳನ್ನು ಜಮಾಲ್ ಶಾ ಮಕ್ರುಬಿ, ಕಮಾಲ್ ಶಾ ಮಕ್ರುಬಿ ಗುರುಗಳಿಗೆ ಸಮರ್ಪಿಸಿದರು. ಬಾಬಾಬುಡನ್ ದರ್ಗಾದ ವಂಶಸ್ಥರಾದ ಸೈಯದ್ ಫಕ್ರುದ್ದೀನ್ ಶಾಖಾದ್ರಿ ಹಾಗೂ ಬಳ್ಳಾರಿಯ ಸೂಫಿ ಗುರುಗಳಾದ ಶಮೀರ್ ಶೇಠ್ ಖಲಂದರ್, ಜಸ್ತೀಸ್ ಸಾಬ್ರಿ ಮತ್ತು ಚಿಕ್ಕಮಗಳೂರು ನಗರದ ಮಹಮ್ಮದ್ ಹಾಗೂ ಹಲವು ಭಕ್ತರುಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
    ರಾಜ್ಯ ಹಜರತ್ ಟಿಪ್ಪೂ ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಕಾರ್ಯಕರ್ತರಾದ ಸಜೀಲ್ ಅಹಮ್ಮದ್, ಸೈಯದ್ ಹಬೀದ್ ರಿಜ್ವಾನ್, ಆಸಿಫ್, ಅಬ್ದುಲ್ ರೆಹಮಾನ್, ತನ್ವೀರ್, ರಾಘವೇಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts