More

    ಅಹಿಂಸಾ ತತ್ವಗಳನ್ನು ಎಲ್ಲರೂ ಪಾಲಿಸೋಣ

    ಆಲೂರು: ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ. ಗಾಂಧೀಜಿ ಅವರ ಅಹಿಂಸಾ ತತ್ವಗಳನ್ನು ಎಲ್ಲರೂ ಪಾಲಿಸೋಣ ಎಂದು ಲಯನ್ಸ್ ಸೇವಾ ಸಂಸ್ಥೆಯ ಆಲೂರು ತಾಲೂಕು ಅಧ್ಯಕ್ಷ ಪ್ರವೀಣ್ ಹೇಳಿದರು.

    ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಲೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಪ್ರಯುಕ್ತ ಶಾಲೆಯ ಸುಮಾರು 100 ವಿದ್ಯಾರ್ಥಿಗಳಿಗೆ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್‌ಬುಕ್ ಸೇರಿದಂತೆ ಅಗತ್ಯ ಪರಿಕರಗಳನ್ನು ವಿತರಿಸಿ ಮಾತನಾಡಿದರು.

    ನನ್ನ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿ ಅವರು ತಮ್ಮ ಸರಳ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಇತರ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು. ಅದೇ ರೀತಿ ಸರಳ ಮತ್ತು ಸೌಜನ್ಯಯುತ ನಡವಳಿಕೆಯನ್ನು ಹೊಂದಿದ್ದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರೂ ದೇಶದ ಪ್ರಗತಿಗೆ ಶ್ರಮಿಸಿದ್ದರು ಎಂದರು.

    ಆಲೂರು ಲಯನ್ಸ್ ಸೇವಾ ಸಂಸ್ಥೆ ಕಾರ್ಯದರ್ಶಿ ಟಿ.ಆರ್ ಆನಂದ್, ಖಜಾಂಚಿ ರಾಮಚಂದ್ರ, ಮಾಜಿ ಅಧ್ಯಕ್ಷ ರಘು ಪಾಳ್ಯ ಪ್ರಾಂತೀಯ ಅಧ್ಯಕ್ಷ ಜಗದೀಶ್, ಸದಸ್ಯರಾದ ನಾಗರಾಜ್, ನೂತನ್ ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ, ಸಹಶಿಕ್ಷಕಿ ವರಲಕ್ಷ್ಮಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಹಾಗೂ ಮಕ್ಕಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts