ನಿತ್ಯೋತ್ಸವ ಯಶಸ್ಸಿಗೆ ದೃಢತೆ ನಮ್ಮಲ್ಲಿರಲಿ

poster
Published on

ಪಡುಬಿದ್ರಿ: ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ನಡೆಯುತ್ತಿರುವ ಸಮಗ್ರ ಜೀರ್ಣೋದ್ಧಾರ, ನವಚಂಡಿಯಾಗ, ಸ್ವರ್ಣ ಗದ್ದುಗೆ ಮತ್ತು ರಜತ ರಥ ಸಮರ್ಪಣೆ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಪ್ರತಿಷ್ಠೆ, ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವದ ಬಳಿಕ ದೃಢಕಲಶೋತ್ಸವದವರೆಗಿನ 48 ದಿನ ನಡೆಯಲಿರುವ ನಿತ್ಯೋತ್ಸವವನ್ನೂ ಯಶಸ್ವಿಯಾಗಿ ಆಯೋಜಿಸುವ ದೃಢತೆ ನಮ್ಮಲ್ಲಿರಲಿ ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹೇಳಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸೋಮವಾರ ಬ್ರಹ್ಮಕಲಶೋತ್ಸವ ಸಮಿತಿ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ಬ್ರಹ್ಮಕಲಶೋತ್ಸವ ಸಮಿತಿ ವಿವಿಧ ಉಪಸಮಿತಿಗಳ ಘೋಷಣೆ, ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪ್ರಧಾನ ತಂತ್ರಿ ಕುಮಾರಗುರು ತಂತ್ರಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಲಾಲಾಜಿ ಆರ್. ಮೆಂಡನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ಕೆ.ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಕಾರ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಆಡಳಿತ ಮೊಕ್ತೇಸರ ಮನೋಹರ ಎಸ್. ಶೆಟ್ಟಿ, ವಿವಿಧ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಭಗವಾನ್‌ದಾಸ್ ಶೆಟ್ಟಿಗಾರ್ ಸ್ವಾಗತಿಸಿದರು. ಯೋಗೀಶ್ ಶೆಟ್ಟಿ ಬಾಲಾಜಿ ಉಪಸಮಿತಿ ಮತ್ತು ಸಮಿತಿ ಪದಾಧಿಕಾರಿಗಳ ಪಟ್ಟಿ ಘೋಷಿಸಿದರು. ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್.ಪಾಲನ್ ವಂದಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.

ಕಾಪುವಿನ ಅಮ್ಮ ತನಗೆ ಏನು ಬೇಕೋ ಅದನ್ನು ಮಕ್ಕಳಿಂದ ನಡೆಸಿಕೊಂಡು ಬರುತ್ತಿದ್ದಾಳೆ. ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಅನುಗ್ರಹ, ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರ ದೃಢಸಂಕಲ್ಪ ಮತ್ತು ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರ ಬೆಂಬಲ ಮತ್ತು ಪ್ರಪಂಚದಾದ್ಯಂತ ನೆಲೆಸಿರುವ ಅಮ್ಮನ ಮಕ್ಕಳೆಲ್ಲರ ತನು, ಮನ, ಧನದ ಸಹಕಾರದೊಂದಿಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಭೂತೋ ಎಂಬಂತೆ ಆಯೋಜಿಸೋಣ. -ಗುರ್ಮೆ ಸುರೇಶ್ ಶೆಟ್ಟಿ ಶಾಸಕ https://www.vijayavani.net/the-contribution-to-the-development-of-schools-is-great https://www.vijayavani.net/police-system-to-be-set-up-on-highway

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net