More

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲಿ

    ಚಾಮರಾಜನಗರ: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಹನೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಂಜಮಣಿ ಸಲಹೆ ನೀಡಿದರು.


    ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಈ ಹಿಂದೆ ಸಮಾಜದಲ್ಲಿ ಮಹಿಳೆಯರನ್ನು ಅಡುಗೆ ಕೋಣೆಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಇದರಿಂದ ಅವಕಾಶ ವಂಚಿತರಾಗಿದ್ದು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿರಲಿಲ್ಲ. ಆದರೀಗ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಮೂಲಕ ತಮ್ಮ ಕಾರ್ಯಕ್ಷಮತೆಯ ದೃಢ ವಿಶ್ವಾಸವನ್ನು ಹೊಂದಿದ್ದಾರೆ. ಹಾಗೆಯೇ ಸ್ವಾವಲಂಬನೆಯ ಬದುಕನ್ನು ರೂಪಿಸಿಕೊಳ್ಳಲು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವುದು ಮೆಚ್ಚುಗೆಯ ಸಂಗತಿ ಎಂದು ತಿಳಿಸಿದರು.

    ಫಾದರ್ ರೋಷನ್, ಪ್ರಾಂಶುಪಾಲೆ ಅರುಳ್ ಶಾಂತಿ, ಸಂಸ್ಥೆಯ ಯೋಜನಾಧಿಕಾರಿ ಅನಿಸ್, ಸಿಸ್ಟರ್‌ಗಳಾದ ರಿಯಾ, ತೆರೇಸಾ, ಮೇರಿ ಜಾರ್ಜ್, ಗ್ರಾಪಂ ಕಾರ್ಯದರ್ಶಿ ದೊರೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts