More

    ಮಹಿಳೆಯರು ತಮ್ಮ ವ್ಯಕ್ತಿತ್ವದಿಂದ ಗುರುತಿಸಿಕೊಳ್ಳಲಿ

    ಚಾಮರಾಜನಗರ : ಮಹಿಳೆಯರು ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಮಹಿಳಾ ದಿನ ಉತ್ತಮ ವೇದಿಕೆಯಾಗಿದೆ ಎಂದು ಬೈರಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಎಂ.ನೇತ್ರಾವತಿ ಹೇಳಿದರು.


    ಪಟ್ಟಣದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವೇದಿಕೆಯಿಂದ ಗುರುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ತಮ್ಮ ವ್ಯಕ್ತಿತ್ವದಿಂದ ಗುರುತಿಸಿಕೊಳ್ಳುವಂತಹ ಸಾಧನೆ ಮಾಡಬೇಕು. ಎಲ್ಲ ಸವಾಲುಗಳನ್ನು ಧೈರ್ಯವಾಗಿ ಎದುರಿಸಿ ಯೋಚನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.


    ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಪ್ರಭು ಮಾತನಾಡಿದರು. ಭಿತ್ತಿ ಚಿತ್ರದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಪ್ರಮೀಳಾ ಹಾಗೂ 36ನೇ ರಾಷ್ಟ್ರೀಯ ಮಟ್ಟದ ನೆಟ್‌ಬಾಲ್ ಚಾಂಪಿಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದ ರೀತುನಾಯಕ್ ಅವರನ್ನು ಸನ್ಮಾನಿಸಲಾಯಿತು.


    ಐಕ್ಯೂಐಸಿ ಸಂಚಾಲಕ ಎಚ್.ಜಿ.ನಟರಾಜನ್, ಮೈಸೂರಿನ ಮಹಾಜನ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಕೆ.ಉಮಾ, ಚಾಮರಾಜನಗರ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ಯಳಂದೂರು ಶಾಖೆಯ ಸಹಾಯಕ ವ್ಯವಸ್ಥಾಪಕಿ ಎಂ.ಗೌರಮ್ಮ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts