ಒಗ್ಗೂಡಿ ಗಣರಾಜ್ಯೋತ್ಸವ ಆಚರಿಸೋಣ

blank

ಕೊಳ್ಳೇಗಾಲ: ಗಣರಾಜ್ಯೋತ್ಸವ ದಿನವನ್ನು ಎಲ್ಲರೂ ಒಗ್ಗೂಡಿ ಸಂಭ್ರಮದಿಂದ ಆಚರಿಸೋಣ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ಜಯಂತಿಗಳ ಆಚರಣೆಗೆ ಸಾರ್ವಜನಿಕರು ಹಾಗೂ ವಿವಿಧ ಇಲಾಖೆ ಸಹಕಾರ ಬಹಳ ಮುಖ್ಯವಾಗಿದೆ. ವರ್ಷದಲ್ಲಿ 32 ಜಯಂತಿಗಳು, 7 ರಾಷ್ಟ್ರೀಯ ಹಬ್ಬಗಳು ನಡೆಯಲಿವೆ. ತಾಲೂಕಿನಲ್ಲಿ 39 ಇಲಾಖೆಗಳ ಪಟ್ಟಿ ಮಾಡಲಾಗಿದೆ. ಆದರೂ, ಕೆಲವೊಂದು ಅಧಿಕಾರಿಗಳು ಜಯಂತಿ ಪೂರ್ವಭಾವಿ ಸಭೆಗೆ ಗೈರಾಗುವುದು ಅವರ ನಿರ್ಲಕ್ಷೃ ತೋರುತ್ತದೆ. ಜಯಂತಿಗಳಿಗೆ ಸರ್ಕಾರದಿಂದ ಹಣ ಬರುತ್ತದೆ ಆದರೂ ಇಲಾಖೆವಾರು ಸಹಕಾರ ಪಡೆಯುತ್ತಾರೆ. ಹಣ ನುಂಗುತ್ತಾರೆ ಎಂಬ ಮಾತುಗಳನ್ನು ಕೆಲವು ಅಧಿಕಾರಿಗಳೇ ಮಾತನಾಡಿರುವುದು ನನ್ನ ಗಮನಕ್ಕೆ ಬಂದಿದೆ. ಈ ತಪ್ಪು ಕಲ್ಪನೆಗಳು ಹೋಗಲಾಡಿಸಲೆಂದೆ ಈ ವರ್ಷದ ಜಯಂತಿಗಳ ಜವಾಬ್ದಾರಿಯನ್ನು ಆಯಾ ಇಲಾಖೆಗಳಿಗೆ ವಹಿಸಲಾಗಿದೆ. ಬಹಿರಂಗವಾಗಿಯೇ ನಿಮ್ಮ ಜವಾಬ್ದಾರಿಗಳನ್ನು ಹೇಳಲಾಗುತ್ತಿದೆ ಎಂದರು.

ಜಯಂತಿಗಳಲ್ಲಿ ಹಣ ದುರಪಯೋಗ ಆಗುತ್ತಿದೆ ಎಂಬುದು ಸುಳ್ಳು. ಇಂತಹ ಭಾವನೆಗಳು ಯಾವ ಅಧಿಕಾರಿಗೂ ಬರಬಾರದು. ಆದ್ದರಿಂದ ಯಾವುದೇ ಜಯಂತಿ ಆಗಲಿ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಈಗಾಗಲೇ ತಹಸೀಲ್ದಾರ್ ಜವಾಬ್ದಾರಿ ಪಟ್ಟಿಯನ್ನು ಇಲಾಖಾವಾರು ಹಂಚಿಕೆ ಮಾಡಿದ್ದಾರೆ. ಅದನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಶಾಸಕರು ಮನವಿ ಮಾಡಿದರು.

ಗಣರಾಜ್ಯೋತ್ಸವದ ಅಂಗವಾಗಿ ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು. ಸರ್ಕಾರಿ ಕಟ್ಟಡಗಳಿಗೆ ದೀಪಲಂಕಾರ ಮಾಡಬೇಕು. ಕಾರ್ಯಕ್ರಮದಲ್ಲಿ ಭಾರತ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈನಿಕರಿಗೆ ಸನ್ಮಾನ ಮಾಡಬೇಕು ಎಂದರು.

ಮುಖಂಡ ನಟರಾಜ್ ಮಾಳಿಗೆ ಮಾತನಾಡಿ, ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಕಾಪಾಡಿಕೊಳ್ಳಬೇಕೆಂದರು. ಮುಖಂಡ ರಾಜಶೇಖರ್ ಮಾತನಾಡಿ, 75ನೇ ವರ್ಷದ ಸಂವಿಧಾನ ದಿನಾಚರಣೆ ಅಮೃತ ಮಹೋತ್ಸವದಲ್ಲಿ ಜ.25 ರಂದು ಮ್ಯಾರಥಾನ್ ಆಯೋಜಿಸುವಂತೆ ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಗಣರಾಜ್ಯೋತ್ಸವ ಪಟ್ಟಣದ ನ್ಯಾಷನಲ್ ಶಾಲಾ ಮೈದಾನದಲ್ಲಿ ಆಯೋಜನೆಗೊಳ್ಳಲಿದೆ. ದ್ವಜಾರೋಹಣಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಳ್ಳಲಿದೆ. ಪೊಲೀಸ್ ಇಲಾಖೆ ಮತ್ತು ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಲಿದೆ. ನಂತರ, ವೇದಿಕೆ ಕಾರ್ಯಕ್ರಮ ನೆರವೇರಲಿದ್ದು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ನಗರಸಭಾಧ್ಯಕ್ಷೆ ರೇಖಾ ರಮೇಶ್, ತಹಸೀಲ್ದಾರ್ ಬಸವರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರು ಶಾಂತಪ್ಪ ಬೆಳ್ಳುಂಗಡಿ, ಡಿವೈಎಸ್ಪಿ ಎಂ.ಧಮೇಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…