More

    ಸೊಳ್ಳೆಗಳಿಂದ ಹರಡುವ ರೋಗ ನಿಯಂತ್ರಿಸೋಣ

    ಹುಬ್ಬಳ್ಳಿ: ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಮಲೇರಿಯಾ, ಆನೆಕಾಲು ರೋಗ, ಮಿದುಳು ಜ್ವರ, ಡೆಂಘಿ ಜ್ವರ, ಚಿಕೂನ್​ಗುನ್ಯಾ, ಝೀಕಾ ವೈರಸ್ ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಈಗ ಆರೋಗ್ಯ ಇಲಾಖೆ ಜತೆಗೂಡಿ ಶಿಕ್ಷಣ ಇಲಾಖೆಯೂ ಶಾಲಾ ಮಕ್ಕಳು, ಪಾಲಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸೊಳ್ಳೆಗಳಿಂದ ಹರಡುವ ರೋಗಗಳನ್ನು ಸಂಪೂರ್ಣ ನಿಮೂಲನೆ ಮಾಡೋಣ ಎಂದು ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ ಅಭಿಪ್ರಾಯಪಟ್ಟರು.

    ಜಿಲ್ಲಾ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಾಲಯ ವತಿಯಿಂದ ನಗರದ ಬಿಇಒ ಕಚೇರಿಯಲ್ಲಿ ಗ್ರಾಮೀಣ ಮತ್ತು ಶಹರ ವಲಯದ ವಿಜ್ಞಾನ ಶಿಕ್ಷಕರಿಗೆ ಗುರುವಾರ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

    ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯಲಕ್ಷ್ಮೀ ಸೊಪ್ಪನ ಮಾತನಾಡಿ, ಜನಸಮುದಾಯಕ್ಕೆ ಸಾಂಕ್ರಾಮಿಕ ರೋಗಗಳ ಹರಡುವಿಕೆ, ನಿಯಂತ್ರಣ ಮತ್ತು ಚಿಕಿತ್ಸೆ ಬಗ್ಗೆ ಪರಿಣಾಮಕಾರಿಯಾಗಿ ತಿಳಿಹೇಳಬೇಕಿದೆ. ಇದರಿಂದ ಜನಾರೋಗ್ಯ ಹೊಂದಲು ಸಾಧ್ಯವಾಗುವುದು ಎಂದರು.

    ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಲಿಂಗರಾಜ ರಾಮಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಎನ್​ವಿಬಿಡಿಸಿಪಿ ಅಧಿಕಾರಿ ಡಾ. ಮಂಜುನಾಥ ಎಸ್., ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ತಿಮ್ಮಾರಡ್ಡಿ, ಹಿರಿಯ ಜಿಲ್ಲಾ ಆರೋಗ್ಯಾಧಿಕಾರಿ ಎ.ಎಸ್. ಮಜ್ಜಗಿ, ತಾಲೂಕು ಆರೋಗ್ಯಾಧಿಕಾರಿ ಜಿ.ವಿ. ಓಂಕಾರಿಗೌಡ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಮೃತ್ಯುಂಜಯ ಜಡೀಮಠ ನಿರ್ವಹಿಸಿದರು. ಇಸಿಒ ಆರ್.ಬಿ. ಪಾಟೀಲ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಅನುರಾಧಾ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts