ಗಾಂಧಿ ಜಯಂತಿಯಲ್ಲಿ ಶಾಸಕ ಕೆ.ವೈ.ನಂಜೇಗೌಡ ಸಲಹೆ
ಮಾಲೂರು:ಭಾರತ ದೇಶಕ್ಕೆ ಶಾಂತಿ ಬೋಧಿಸಿದ ಮಹಾತ್ಮ ಗಾಂಧೀಜಿ ಹಾಗೂ ಪ್ರಧಾನಿಗಳಾಗಿ ದೇಶಕ್ಕೆ ಉತ್ತಮ ಆಡಳಿತ ನೀಡಿದ ಲಾಲ್ ಬಹಾದೂರ್ ಶಾಸ್ತ್ರಿ ಮಹಾನ್ ಪುರುಷರು ಎಂದು ಶಾಸಕ ಕೆ.ವೈ.ನಂಜೇಗೌಡ ಬಣ್ಣಿಸಿದರು. ಪಟ್ಟಣದಲ್ಲಿ ಬುಧವಾರ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಪಲ್ಲಕ್ಕಿ ಉತ್ಸವ ಹಾಗೂ 10 ಕಿ.ಮೀ. ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಗಾಂಧೀಜಿ ಅವರು ಜಾತಿ&ಧರ್ಮಗಳನ್ನು ಒಟ್ಟುಗೂಡಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡುರ. ಯಾವುದೇ ಕೋಮುಗಲಭೆಗೆ ಅವಕಾಶ ನೀಡದೆ ಶಾಂತಿಯಿಂದ ದೇಶವನ್ನು ದಾಸ್ಯಮುಕ್ತಗೊಳಿಸಿದರು. ಹಾಗಾಗಿ ಗಾಂಧಿ ಅವರ ಹಾದಿಯಲ್ಲಿಯೇ ನಾವು ಸಾಗಬೇಕು ಎಂದರು.
ಪಟ್ಟಣದಲ್ಲಿ ಪಾದಯಾತ್ರೆ ಮೂಲಕ ಸಾಗಿ ಕೆಂಪೇಗೌಡ ಪುತ್ಥಳಿ, ಬಸ್ ನಿಲ್ದಾಣದ ಬಳಿಯ ಅಂಬೇಡ್ಕರ್ ಪುತ್ಥಳಿ, ಸ್ವಾಮಿ ವಿವೇಕಾನಂದರವರ ಪುತ್ಥಳಿ, ಮಹಾರಾಜ ವೃತ್ತದಲ್ಲಿರುವ ಮಹಾರಾಜರ ಪುತ್ಥಳಿ, ಡಾ.ರಾಜಕುಮಾರ್ ಪುತ್ಥಳಿ, ಚಲನಚಿತ್ರ ನಟರಾದ ಶಂಕರ್ ನಾಗ್, ವಿಷ್ಣುವರ್ಧನ್, ಪುನೀತ್ ರಾಜಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಗಾಂಧಿ ವೃತ್ತದ ಮಹಾತ್ಮ ಗಾಂಧೀಜಿ ಪುತ್ಥಳಿ ಪುಷ್ಪನಮನ ಸಲ್ಲಿಸಿದರು.
ಮಾಲೂರು ಅಭಿವೃದ್ಧಿಗೆ 1200 ಕೋಟಿ ಅನುದಾನ: ಮಾಲೂರು ತಾಲೂಕಿನ ಅಭಿವೃದ್ಧಿಗೆ 1,200 ಕೋಟಿ ರೂ. ಅನುದಾನ ತಂದಿದ್ದು, ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ಪೈಕಿ 2 ಕೋಟಿ ರೂಗಳ ವೆಚ್ಚದಲ್ಲಿ ರಂಗಮಂದಿರ ಅಭಿವೃದ್ಧಿ, 20 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ, 30 ಕೋಟಿ ರೂ. ವೆಚ್ಚದಲ್ಲಿ ಮಾಲೂರು ದೊಡ್ಡ ಕೆರೆ ಅಭಿವೃದ್ಧಿ, 42 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಪ್ರತಿಯೊಂದು ವಾರ್ಡಿಗೂ ಅಗತ್ಯ ಸೌಕರ್ಯ ಒದಗಿಸಲಾಗುವುದು. ಪ್ರತಿಯೊಂದು ವಾರ್ಡಿನ ರಸ್ತೆಗಳಿಗೂ ಡಾಂಬರೀಕರಣ ಮಾಡಲಾಗುವುದು. ಎಪಿಎಂಸಿ ಯಾರ್ಡ್ರ್ನಿಂದ ಹೊಸೂರು ರಸ್ತೆಯವರೆಗೆ 3 ಕಿ.ಮೀ ್ಲೆ$ಓವರ್ಅನ್ನು 350 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ವೇದಿಕೆ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು, ಅರ್ಹ ಫಲಾನುಭವಿಗಳಿಗೆ ಪಂಪ್ ಮೋಟಾರ್ಗಳನ್ನು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರುಗಳಿಗೆ ಉಡುಗೊರೆಯಾಗಿ ಸೀರೆ ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯರಾದ ಕ್ಷೇತ್ರನಹಳ್ಳಿ ವೆಂಕಟೇಶ್ ಗೌಡ, ದರ್ಕಾ ಸಮಿತಿಯ ಸದಸ್ಯ ಬನಹಳ್ಳಿ ಸತೀಶ್, ಪುರಸಭೆ ಸದಸ್ಯರಾದ ಬುಲೆಟ್ ವೆಂಕಟೇಶ್, ಮುರಳೀಧರ್, ಇಮ್ತಿಯಾಸ್ ಖಾನ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ, ತಾಲೂಕು ಕಸಾಪ ಅಧ್ಯಕ್ಷ ಎಂವಿ ಹನುಮಂತಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯನರಸಿಂಹ, ಎಂಜಿ ಮಧುಸೂದನ್, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಎ.ಅಶ್ವತ್ಥ ರೆಡ್ಡಿ, ಬಿಇಒ ಚಂದ್ರಕಲಾ ಇದ್ದರು.