ಮಹನೀಯರ ಆದರ್ಶ ಮುಂದಿನ ಪೀಳೆಗೆಗೆ ಮಾರ್ಗಸೂಚಿಯಾಗಲಿ

ಮಳವಳ್ಳಿ: ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಬಸವಣ್ಣ ಹಾಗೂ ಅಂಬೇಡ್ಕರ್ ಅವರ ತತ್ವಾದರ್ಶ ಮುಂದಿನ ಪೀಳೆಗೆಗೆ ಮಾರ್ಗಸೂಚಿಯಾಗಬೇಕಿದೆ ಎಂದು ನಿವೃತ್ತ ಪ್ರಾಂಶುಪಾಲ ಜಿ.ಟಿ.ವೀರಪ್ಪ ತಿಳಿಸಿದರು.

ಪಟ್ಟಣದ ಬಿಆರ್‌ಸಿ ಕಚೇರಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಆಯೋಜಿಸಿದ್ದ ಬಸವೇಶ್ವರ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಾನ್ ವ್ಯಕ್ತಿಗಳ ಜಯಂತಿ ಕೇವಲ ಆಚರಣೆಗಷ್ಟೆ ಸೀಮತವಾಗಬಾರದು. ಬದಲಾಗಿ ಯುವ ಸಮುದಾಯ ಅವರ ಚಿಂತನೆಗಳನ್ನು ಅನುಸರಿಸಬೇಕು ಎಂದರು.

ರೈತ ಸಂಘದ ರಾಜಾಧ್ಯಕ್ಷ ಜಿ.ಸಿ.ಬಯ್ಯರೆಡ್ಡಿ, ತಾಲೂಕು ಅಧ್ಯಕ್ಷ ಭರತ್‌ರಾಜ್, ಕಾರ್ಯದರ್ಶಿ ಲಿಂಗರಾಜುಮೂರ್ತಿ, ಸಾಹಿತಿ ಬಸಪ್ಪ ನೆಲಮಾಕನಹಳ್ಳಿ, ಮ.ಸಿ.ನಾರಯಣ್, ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಸುಶೀಲಾ ಇತರರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *