More

    ಈಗ ಆ ವಿಚಾರ ದೊಡ್ಡದು ಮಾಡೋದು ಬೇಡ: ನಟ ಶಿವರಾಜ್​ಕುಮಾರ್ ಹೀಗಂದಿದ್ಯಾಕೆ?

    ಬೆಂಗಳೂರು: ಬಿಡುಗಡೆಗೆ ಮುನ್ನ ಸಂಕಷ್ಟಕ್ಕೀಡಾಗಿ ಕೊನೆಗೂ ಕಾನೂನಾತ್ಮಕವಾಗಿ ಗೆದ್ದು, ಈಗ ಪ್ರೇಕ್ಷಕರಿಂದಲೂ ಮೆಚ್ಚುಗೆ ಗಳಿಸುತ್ತಿರುವ ‘ಹಾಸ್ಟೆಲ್​ ಹುಡುಗರ’ ಜೊತೆ ನಟ ಶಿವರಾಜ್​ಕುಮಾರ್​ ಬೆಂಬಲವಾಗಿ ನಿಂತಿದ್ದಾರೆ. ಅರ್ಥಾತ್, ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡದ ಜತೆ ಬೆರೆತು ಮಾತುಕತೆ ನಡೆಸಿದ ಅವರು ಚಿತ್ರತಂಡದ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಶಿವರಾಜ್​ಕುಮಾರ್ ಅವರ ಪತ್ನಿ ಗೀತಾ ಮತ್ತು ಪುತ್ರಿ ನಿವೇದಿತಾ ನಿನ್ನೆ ಚಿತ್ರಮಂದಿರದಲ್ಲಿ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರವನ್ನು ವೀಕ್ಷಿಸಿದ್ದರು. ಇಂದು ಶಿವಣ್ಣನ ನಾಗವಾರ ನಿವಾಸದಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಸಕ್ಸಸ್ ಮೀಟ್ ಹಮ್ಮಿಕೊಳ್ಳಲಾಗಿತ್ತು. ಹೊಸಬರ ಹೊಸ ಪ್ರಯತ್ನಕ್ಕೆ ಶಿವರಾಜ್​ಕುಮಾರ್ ದಂಪತಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

    ಇಡೀ ಚಿತ್ರತಂಡಕ್ಕೆ ಗುಡ್ ಲಕ್. ನಿನ್ನೆ ನಾನು ಸಿನಿಮಾ ನೋಡಬೇಕಿತ್ತು. ಆದರೆ ಜಾಹೀರಾತು ಶೂಟ್ ಇದ್ದಿದ್ದರಿಂದ ಆಗಲಿಲ್ಲ. ಹೀಗಾಗಿ ನೈತಿಕ ಬೆಂಬಲವಾಗಿ ಗೀತಾ ಬಂದಿದ್ದರು. ನನ್ನ ಪರವಾಗಿ, ನನ್ನ ಚಿಕ್ಕ ಮಗಳು ನಿವೇದಿತಾ ಸೇರಿ ಎಲ್ಲರೂ ಸಿನಿಮಾ ನೋಡಿದರು. ನಿರ್ಮಾಪಕ ವರುಣ್ ನನಗೆ 15 ವರ್ಷಗಳಿಂದ ಗೊತ್ತು. ಆ ಸಮಯದಿಂದ ನೋಡುತ್ತಿದ್ದೇನೆ. ತುಂಬ ಕಷ್ಟಪಟ್ಟು ಮೇಲೆ ಬಂದವರು. ಏನೇ ಮಾಡಿದರೂ ಬಹಳ ಶಿಸ್ತಿನಿಂದ ಮಾಡುತ್ತಾರೆ. ಅವರ ಬಳಿಕ ಸಿನ್ಸಿಯಾರಿಟಿ ಇದೆ. ನನಗೆ ಅದು ತುಂಬಾ ಇಷ್ಟ. ಸಾಂಗ್ಸ್ ಎಲ್ಲಾ ನೋಡಿದಾಗ ತುಂಬಾ ಇಂಟ್ರೆಸ್ಟಿಂಗ್ ಅನಿಸಿತು. ಜನ ಥಿಯೇಟರ್​​ಗೆ ಬಂದು ಸಪೋರ್ಟ್ ಮಾಡಿದ್ದಾರೆ. ಇಡೀ ಸ್ಯಾಂಡಲ್ ವುಡ್ ಸಿನಿಮಾಗೆ ಸಾಥ್ ಕೊಟ್ಟಿದೆ. ಇಂಡಸ್ಟ್ರಿ ಎಂದರೆ ಒಂದು ಫ್ಯಾಮಿಲಿ. ಫ್ಯಾಮಿಲಿ ಅಂದಾಗ ಯಾರದ್ದೇ ಸಿನಿಮಾ ಆಗಲಿ ಪ್ರೋತ್ಸಾಹ ಮಾಡಬೇಕು ಎಂದರು.

    ಇದನ್ನೂ ಓದಿ: ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

    ಈ ಚಿತ್ರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಲೀಗಲ್ ನೋಟಿಸ್ ಕೊಟ್ಟಿದ್ದರ ಕುರಿತು ಕೂಡ ನಟ ಶಿವರಾಜ್​ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಾರ ಬಗ್ಗೆಯೂ ಕಮೆಂಟ್ ಮಾಡುವುದು ಬೇಡ. ಎಲ್ಲದಕ್ಕಿಂತ ಕೊನೆಗೆ ಗೆಲುವು ಮುಖ್ಯ. ಸಿನಿಮಾ ಬರುವುದಕ್ಕೂ ಮೊದಲು ಒಳ್ಳೆಯ ರಿಪೋರ್ಟ್ ಇತ್ತು. ಒಳ್ಳೆಯ ಮನಸ್ಸಿನಿಂದ ಮಾಡಿದರೆ ಅದಕ್ಕೆ ಯಾವುದೇ ತಡೆ ಬರಲ್ಲ. ಅದಕ್ಕೆ ಇದೇ ಉತ್ತಮ ಉದಾಹರಣೆ. ಅಭಿಮಾನಿ ದೇವರುಗಳು ಒಳ್ಳೆಯ ಸಿನಿಮಾ ಕೈಬಿಡಲ್ಲ. ಸತ್ಯ ಇದ್ದರೆ ಜಯ ಇದ್ದೇ ಇರುತ್ತೆ. ಅವರವರು ತಿಳಿದುಕೊಳ್ಳಬೇಕು. ಯಾಕೆ ಹೀಗಾಯ್ತು ಎನ್ನುವುದು ಗೊತ್ತಾಗ್ತಿಲ್ಲ. ನಮ್ಮ ಇಂಡಸ್ಟ್ರಿ ಬೆಳೆಯಬೇಕು ಅಷ್ಟೇ. ಅದನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಹೊಸಬರು ಬಂದಾಗ ಎಲ್ಲರೂ ಸಪೋರ್ಟ್ ಮಾಡಬೇಕು. ಆ ವಿಚಾರವನ್ನು ಈಗ ದೊಡ್ಡದು ಮಾಡುವುದು ಬೇಡ ಎಂದರು.

    ಇದನ್ನೂ ಓದಿ: ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

    ಈ ಥರ ಸಿನಿಮಾ ನೋಡಿ ಬಹಳ ವರ್ಷವಾಗಿತ್ತು. ವರುಣ್ ನಮ್ಮ ಕುಟುಂಬ. ನಿರ್ದೇಶಕರಿಂದ ಹಿಡಿದು ಎಲ್ಲರು ಹೊಸಬರೇ. ಎಲ್ಲವೂ ಹೊಸತನದಿಂದ ಕೂಡಿದೆ. ಹಾಸ್ಟೆಲ್ ಲೈಫ್ ಹೀಗೆ ಇತ್ತೇನೋ ಅನಿಸುವಷ್ಟು ಬಹಳ ಸ್ವಾಭಾವಿಕವಾಗಿತ್ತು. ಈ ಥರ ಸಿನಿಮಾಗಳು ಮತ್ತಷ್ಟು ಬರಬೇಕು. ಆರಂಭದಿಂದ ಕೊನೆಯ ತನಕ ಎಲ್ಲಿಯೂ ಬೋರ್ ಆಗುವುದಿಲ್ಲ. ನಾನು ಸಿನಿಮಾ ಎಂಜಾಯ್ ಮಾಡಿದೆ ಎಂದು ಗೀತಾ ಶಿವರಾಜ್​ಕುಮಾರ್​ ಹೇಳಿದರು.

    ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ದಿಗಂತ್, ರಿಷಬ್ ಶೆಟ್ಟಿ, ಶೈನ್​ ಶೆಟ್ಟಿ, ಪವನ್ ಕುಮಾರ್, ರಮ್ಯಾ ಸಾಥ್ ಕೊಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಬ್ಯಾನರ್​​ನಡಿ ಈ ಚಿತ್ರವನ್ನು ಅರ್ಪಿಸಿದ್ದಾರೆ. ಬಹುತೇಕ ಹೊಸ ಪ್ರತಿಭೆಗಳು ನಟಿಸಿ ಸೈ ಎನಿಸಿಕೊಂಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ವರುಣ್ ಗೌಡ ಹಾಗೂ ಪ್ರಜ್ವಲ್ ನಿರ್ಮಿಸಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಈ ಚಿತ್ರಕ್ಕಿದೆ.

    ಬೆಂಗಳೂರಲ್ಲಿ ಇದೇ ಭಾನುವಾರ ಕುಂದಾಪ್ರ ಕನ್ನಡ ಹಬ್ಬ: ಸಿಎಂ ಉಪಸ್ಥಿತಿ, ಸಂಭ್ರಮಕ್ಕೆ ಸ್ಟಾರ್ ಕಳೆ

    ಎಕ್ಸಾಂ ದಿನವೇ ವಿದ್ಯಾರ್ಥಿ ಸಾವು ಪ್ರಕರಣದ ಇನ್ನೊಂದು ಮುಖ: ಏಕೈಕ ಪುತ್ರನನ್ನು ಕಳೆದುಕೊಂಡ ತಾಯಿಯ ಪ್ರಶ್ನೆಗಳಿವು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts