ಸಂವಿಧಾನದ ಪಾವಿತ್ರ್ಯತೆ ಉಳಿಸೋಣ

blm-7
Published on

ಕಾರ್ಕಳ: ಮಹಾತ್ಮರ ಆದರ್ಶ ಅನುಕರಣೆ ಅಗತ್ಯ. ಸಾರ್ವಕಾಲಿಕ ಸತ್ಯವನ್ನು ನಾವೆಲ್ಲ ಒಪ್ಪಿಕೊಂಡು ಆದರಣೀಯರ ಆದರ್ಶ ಅನುಸರಿಸಿ, ಅಂಬೇಡ್ಕರ್ ನೀಡಿದ ಸಂವಿಧಾನದ ಪಾವಿತ್ರ್ಯತೆ ಉಳಿಸೋಣ ಎಂದು ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಥೆಗಾರ ಮಂಜುನಾಥ ಹಿರಿಯಾಣ ಮಾತನಾಡಿ, ಅಳಿದ ಮೇಲೂ ಉಳಿಯುವ ವ್ಯಕ್ತಿಗಳು ನಮಗೆಲ್ಲ ಪ್ರೇರಕ ಶಕ್ತಿಗಳಾಗಿ ನಮ್ಮಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ ಎಂದರು.

ಶೈಕ್ಷಣಿಕ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪುರಸಭೆ ಅಧ್ಯಕ್ಷ ಯೊಗೀಶ ದೇವಾಡಿಗ, ಕಾರ್ಕಳ ತಹಸೀಲ್ದಾರ್ ಪ್ರದೀಪ ಆರ್., ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಕಾರ್ಕಳ ಇನ್‌ಸ್ಪೆಕ್ಟರ್ ಮಂಜಪ್ಪ ಡಿ.ಆರ್. ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಕುಮಾರ ಜಿ.ನಾಯ್ಕ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯ ಮೇಲ್ವಿಚಾರಕಿ ಚೇತನಾ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net