More

    ಜಾನಪದ ಸೊಗಡನ್ನು ಉಳಿಸೋಣ

    ಚನ್ನರಾಯಪಟ್ಟಣ: ಜಾನಪದ ಸೊಗಡು ನಮ್ಮ ನೆಲದ ಸಂಸ್ಕೃತಿಯ ಬುನಾದಿಯಾಗಿದ್ದು, ಜಾನಪದ ಕಲೆಯಿಂದ ಗ್ರಾಮೀಣ ಸೊಗಡು ಶ್ರೀಮಂತಗೊಂಡಿದೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಬೇಕಿದೆ ಎಂದು ಜನಪದ ಕಲಾವಿದ ದೊಡ್ಡಳ್ಳಿ ರಮೇಶ್ ತಿಳಿಸಿದರು.

    ಪಟ್ಟಣದ ಬಿಜಿಎಸ್ ಸಮುದಾಯ ಭವನದಲ್ಲಿ ಶನಿವಾರ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಲರವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಆಧುನಿಕ ಸಮಾಜದಲ್ಲಿ ಗ್ರಾಮೀಣ ಉತ್ಸವ, ಜಾನಪದ ಸಂಸ್ಕೃತಿ ಮರೆಯಾಗುತ್ತಿದೆ. ಪುರಾತನವಾದ ಜಾನಪದ ಸಂಸ್ಕೃತಿಯನ್ನು ಇಂದಿನ ತಲೆಮಾರಿಗೆ ಬಿತ್ತುವ ಅವಶ್ಯಕತೆ ಇದೆ. ಜಾನಪದ ಸಂಸ್ಕೃತಿಯ ಉಳಿವಿಗಾಗಿ ಪ್ರತಿಯೊಬ್ಬರೂ ಪ್ರೋತ್ಸಾಹಿಸಬೇಕು. ಜಾನಪದ ಸಂಸ್ಕೃತಿ ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ಇಂದಿನ ಪೀಳಿಗೆ ಅದನ್ನು ಪ್ರೋತ್ಸಾಹಿಸಿ ಬೆಳೆಸಬೇಕು ಎಂದರು.

    ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಸಂಘಟನಾ ಕಾರ್ಯದರ್ಶಿ ಶಿವನಗೌಡ ಪಾಟೀಲ್ ಮಾತನಾಡಿ, ಜಾನಪದ ಸಂಸ್ಕೃತಿಯಿಂದ ಮಾನವೀಯ ಮೌಲ್ಯ ಹೆಚ್ಚಾಗುತ್ತದೆ. ಜಾನಪದ ಸಂಸ್ಕೃತಿ ಜಾತಿ ಭೇದ, ಮೇಲು-ಕೀಳು ತಾರತಮ್ಯ ಇಲ್ಲದ ಮಾನವೀಯ ಸಂಸ್ಕೃತಿಯಾಗಿದೆ. ಇಂದಿನ ಯುವ ಜನಾಂಗವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲೆಗಳತ್ತ ಸೆಳೆಯಬೇಕಾಗಿದೆ. ಶಾಲಾ- ಕಾಲೇಜುಗಳಲ್ಲಿ ಜಾನಪದ ಸಂಸ್ಕೃತಿಯ ಘನತೆಯನ್ನು ಹೆಚ್ಚಿಸುವಂಥ ಕಾರ್ಯವನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.

    ಡಾ.ಎಂ.ಕೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ನಿಮ್ಮಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲಿಯೂ ಸಾಮಾಜಿಕ ಜವಾಬ್ದಾರಿ ಇರಬೇಕು. ಜೀವನದಲ್ಲಿ ಶಿಕ್ಷಣದ ಜತೆಗೆ ನೈತಿಕ ಮೌಲ್ಯಗಳನ್ನು ಮತ್ತು ಉತ್ತಮ ಸಂಸ್ಕಾರಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಇಂದು ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣಗಳು ಇಂದಿನ ಯುವಸಮೂಹದ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಹೀಗಾಗಿ ಇವುಗಳಿಂದ ಮುಕ್ತಿ ಹೊಂದಿ ಉತ್ತಮ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ವಿವಿಧ ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಾನಪದ ಕಲಾವಿದರ ತಂಡದಿಂದ ಗೀತ ಗಾಯನ ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

    ಕಾಲೇಜಿನ ಸಾಂಸ್ಕೃತಿಕ ಸಮಿತಿ ಕಾರ್ಯದರ್ಶಿ ಎಚ್.ಜೆ.ಅರ್ಪಿತಾ, ಬಿಜಿಎಸ್ ಪಿಯು ಕಾಲೇಜು ಪ್ರಾಂಶುಪಾಲ ಸಿ.ಸಿ.ಕುಮಾರ್, ಸಹಾಯಕ ಪ್ರಾಧ್ಯಾಪಕ ಸಿದ್ದರಾಜು, ಡಿ.ಎಸ್.ಚೇತನ್, ಆರ್.ಕೆ.ಶಿವಪ್ಪ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts