More

    ಶೇ.100ರಷ್ಟು ಮತದಾನಕ್ಕೆ ಶ್ರಮಿಸೋಣ

    ಶೃಂಗೇರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುದು ಪವಿತ್ರವಾದ ಕಾರ್ಯ. ಚುನಾವಣೆ ಸಂದರ್ಭದಲ್ಲಿ ಒಂದೊಂದು ಮತವೂ ನಿರ್ಣಾಯಕವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಸ್ವೀಪ್ ಅಧ್ಯಕ್ಷ ಡಾ.ಗೋಪಾಲಕೃಷ್ಣ ತಿಳಿಸಿದರು.
    ಶುಕ್ರವಾರ ಜಿಲ್ಲಾಡಳಿತ, ತಾಪಂ ಹಾಗೂ ವಿವಿಧ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಸಂಬಂಧ ಮತದಾನ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿ,ಮತದಾನ ನಾಗರಿಕರು ಯಾವುದಾದರೂ ಅಭ್ಯರ್ಥಿಗಳ ಬಗ್ಗೆ ತಮ್ಮ ನಿರ್ಣಯ ಸೂಚಿಸಲು ಅನುವು ಮಾಡಿಕೊಡುವ ಒಂದು ಪ್ರಕ್ರಿಯೆ. ಮತದಾನ ಮಾಡುವ ಕರ್ತವ್ಯವನ್ನು ಸರ್ವರೂ ಪಾಲಿಸಲೇಬೇಕು ಎಂದರು.
    ಮತದಾನ ನ್ಯಾಯಯುತ ಮತ್ತು ಪಾರದರ್ಶಕ ಚುನಾವಣಾ ಪ್ರಕ್ರಿಯೆಯಾಗಿದ್ದು, ಸಾಮಾಜಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸುತ್ತದೆ. ನಾಗರಿಕರು ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಮಾಡಿಕೊಡುತ್ತದೆ. ಹಿಂದೆ ಈ ಕ್ಷೇತ್ರದಲ್ಲಿ ಶೇ. 77ರಷ್ಟು ಮತದಾನವಾಗಿದ್ದು, ಈ ಬಾರಿ ಶೇ.100 ರಷ್ಟು ಮತದಾನವಾಗಲು ಸರ್ವರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
    ವೆಲ್‌ಕಮ್ ಗೇಟ್‌ನಿಂದ ಶ್ರೀಮಠದ ವರೆಗೆ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ಡೇ ನಲ್ಮ್ ಯೋಜನೆ ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಆಶಾ ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಿದ್ದರು. ಜಾಗೃತಿ ಕಾರ್ಯಕ್ರಮದಲ್ಲಿ ಮಾನವಸರಪಳಿ, ಬೈಕ್ ಜಾಥಾ ನಡೆಸಲಾಯಿತು. ತಹಸೀಲ್ದಾರ್ ಗೌರಮ್ಮ, ತಾಪಂ ಇಒ ಸುದೀಪ್, ಕಂದಾಯ ಇಲಾಖೆ ಅಧಿಕಾರಿ ಪ್ರವೀಣ್‌ಕುಮಾರ್, ಪಪಂ ಮುಖ್ಯಾಧಿಕಾರಿ ಶ್ರೀ ಪಾದರಾವ್, ಸಮುದಾಯ ಅಭಿವೃದ್ಧಿ ಅಧಿಕಾರಿ ಕುಪ್ಪೇರಾವ್ ಮೂರಾಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts