More

    ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ: ಥಾವರ್‌ಚಂದ್ ಗೆಹಲೋತ್ ಕರೆ

    ಬೆಂಗಳೂರು: ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಬಣ್ಣಿಸಿದ್ದಾರೆ.

    ಮಹಾತ್ಮ ಗಾಂಧಿ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

    ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದು ಸರ್ಕಾರ ಬದ್ಧತೆ ಮೆರೆದಿದೆ. 195 ಬರ ಪೀಡಿತ ತಾಲೂಕುಗಳಲ್ಲಿ ಬರ ಪರಿಹಾರ ಮತ್ತು ಪರಿಹಾರ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು, ಎನ್‌ಡಿಆರ್‌ಎ್ನಿಂದ ಅನುದಾನ ಕೋರಿದೆ. ರೈತರ ಸಂಕಷ್ಟವನ್ನು ನಿವಾರಿಸಲು ಬರಗಾಲ ಘೋಷಿತ ತಾಲೂಕುಗಳಲ್ಲಿ ಪ್ರತಿ ರೈತನಿಗೆ 2 ಸಾವಿರ ರೂ. ಪರಿಹಾರಧನವನ್ನು ಬಿಡುಗಡೆ ಮಾಡುತ್ತಿದೆ. ಅಂದಾಜು 30 ಲಕ್ಷ ರೈತರಿಗೆ 580 ಕೋಟಿ ರೂ.ಬಿಡುಗಡೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ತಾಲೂಕು ಮಟ್ಟದಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು ನಿರ್ವಹಣೆಗೆ ಹಾಗೂ ಬರ ಪರಿಹಾರ ಕ್ರಮಗಳ ಮೇಲ್ವಿಚಾರಣೆಗಾಗಿ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದ ಕಾರ್ಯಪಡೆ ರಚಿಸಲಾಗಿದೆ ಎಂದು ರಾಜ್ಯಪಾಲರು ಹೇಳಿದರು. ಸಿಎಂ ಸಿದ್ದರಾಮಯ್ಯ, ಸಿಎಂ ರಾಜಕೀಯ ಕಾರ್ಯದರ್ಶಿರಾದ ಕೆ.ಗೋವಿಂದರಾಜು, ನಜೀರ್ ಅಹ್ಮದ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಮತ್ತಿತರರಿದ್ದರು.

    ಅರ್ಹ ಫಲಾನುಭವಿಗಳಿಗೆ ತಲುಪಿಸಲು ಗ್ಯಾರಂಟಿ ಸಮಾವೇಶ

    ಬೆಳೆ ವಿಮೆ ಪರಿಹಾರ
    ರೈತಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ.ನಂತೆ ಗರಿಷ್ಠ 2 ಹೆಕ್ಟೇರ್‌ವರೆಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023ರ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ವೈಫಲ್ಯದಡಿ ಮತ್ತು ಮಧ್ಯಂತರ ಬೆಳೆವಿಮೆ ಪರಿಹಾರದಡಿ 6.77 ಲಕ್ಷ ರೈತರಿಗೆ 459 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ ಇತ್ಯರ್ಥ ಪಡಿಸಲಾಗಿದೆ ಎಂದು ಥಾವರ್‌ಚಂದ್ ಗೆಹಲೋತ್ ವಿವರಿಸಿದರು.ರಾಜ್ಯದ ಎಲ್ಲ ಶಾಲೆಗಳಲ್ಲಿ ‘ಭಾರತ ಸಂವಿಧಾನ’ ಪೀಠಿಕೆ ವಿನ್ಯಾಸದ ಭಾವಚಿತ್ರವನ್ನು ತೂಗು ಹಾಕಲು ಹಾಗೂ ಪ್ರತಿ ನಿತ್ಯ ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆ ಓದಲು ಕ್ರಮವಹಿಸಲಾಗಿದೆ. ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಮತ್ತು ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿ ಮಾಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಬ್ರಾಂಡ್ ಬೆಂಗಳೂರು’ ಯೋಜನೆಯಡಿ ’ಸಾರ್ವಜನಿಕರ ಧ್ವನಿ’ ಸರ್ಕಾರದ ಧ್ವನಿ ಎಂಬ ಮನೋಭಾವದಿಂದ ರೂಪಿಸಲಾಗಿದೆ. 70 ಸಾವಿರಕ್ಕೂ ಹೆಚ್ಚು ಸಲಹೆಗಳು ಸ್ವೀಕಾರವಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts