ಕನ್ನಡ ಬಳಸದಿರುವುದಕ್ಕೆ ಸ್ಪಷ್ಟನೆ ಬಯಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಂದ ಪತ್ರ

Published on

ಮೈಸೂರು: ಸಿದ್ದಾರ್ಥನಗರದಲ್ಲಿರುವ ಪ್ರಾದೇಶಿಕ ನೈಸರ್ಗಿಕ ಇತಿಹಾಸ ವಸ್ತು ಸಂಗ್ರಹಾಲಯದ 30ನೇ ಸಂಸ್ಥಾಪನಾ ದಿನಾಚರಣೆಯ ಆಹ್ವಾನ ಪತ್ರಿಕೆಯಲ್ಲಿ ಕನ್ನಡ ಬಳಸದಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ.

ವಸ್ತು ಸಂಗ್ರಹಾಲಯದಲ್ಲಿ ಮೇ 20ರಂದು ಆಯೋಜಿಸಿದ್ದ ಸಂಸ್ಥಾಪನಾ ದಿನದ ಅಂಗವಾಗಿ ಮುದ್ರಿಸಿರುವ ಆಹ್ವಾನ ಪತ್ರಿಕೆಯಲ್ಲಿ ಇಂಗ್ಲಿಷ್, ಹಿಂದಿ ಭಾಷೆಯನ್ನು ಮಾತ್ರ ಮುದ್ರಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಅರವಿಂದ ಶರ್ಮ ಅವರು ಪ್ರಾಧಿಕಾರದ ಅಧ್ಯಕ್ಷರಿಗೆ ದೂರು ನೀಡಿದ್ದರು.

ಈ ದೂರಿನ ಅನ್ವಯ ವಸ್ತು ಸಂಗ್ರಹಾಲಯದ ಮುಖ್ಯಸ್ಥರಿಗೆ ಪತ್ರ ಬರೆದು, ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದ್ದು, ಯಾವುದೇ ಕೇಂದ್ರ ಸ್ವಾಮ್ಯದ ಸಂಸ್ಥೆಗಳು ಕನ್ನಡಕ್ಕೆ ಮೊದಲು ಆದ್ಯತೆ ಕಲ್ಪಿಸುವುದು ಕಡ್ಡಾಯವಾಗಿದೆ. ಆದರೆ, ಮುದ್ರಿತ ಆಹ್ವಾನ ಪತ್ರದಲ್ಲಿ ವಸ್ತು ಸಂಗ್ರಹಾಲಯದ ಮುಖ್ಯಸ್ಥರಿಗೆ ಕನ್ನಡದ ಮೇಲಿರುವ ತಾತ್ಸಾರ ರುಜುವಾತಾಗುತ್ತದೆ. ಈ ರೀತಿಯ ಕನ್ನಡ ವಿರೋಧಿ ಧೋರಣೆಗೆ ಕಾರಣವೇನು ಎಂಬ ಬಗ್ಗೆ ನಿಮ್ಮಿಂದ ಪ್ರಾಧಿಕಾರವು ಸ್ಪಷ್ಟೀಕರಣ ಬಯಸುತ್ತದೆ. ಮುಂದೆ ಇಂತಹ ಆಚಾತುರ್ಯಗಳಿಗೆ ಅವಕಾಶ ಕಲ್ಪಿಸದೆ ನಿಮ್ಮ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಮೊದಲ ಅದ್ಯತೆ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net