More

    ಚುನಾವಣಾ ಆಯೋಗಕ್ಕೆ ಪತ್ರ

    ಹುಬ್ಬಳ್ಳಿ: ನಗರದಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ವಿವಿಧ ನಾಲಾಗಳು ಹಾಗೂ ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿದೆ. ಶೀಘ್ರವೇ ಪರಿಹಾರ ಕಾರ್ಯ ಆರಂಭಿಸಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ಇಂದೇ ಪತ್ರ ಬರೆದು ಪರಿಹಾರ ಕಾರ್ಯ ನಡೆಸಲು ಅನುಮತಿ ಪಡೆಯಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
    ಇಲ್ಲಿಯ ದೇಶಪಾಂಡೆ ನಗರ, ನ್ಯೂ ಕಾಟನ್‌ಮಾರ್ಕೆಟ್, ಹೊಸೂರು ನಾಲಾ ಹಾಗೂ ವಿದ್ಯಾನಗರದ ಅಪಾರ್ಟ್‌ಮೆಂಟ್‌ಗಳನ್ನು ಸೋಮವಾರ ವೀಕ್ಷಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
    ಈ ಮೊದಲು ಮಹಾನಗರ ಪಾಲಿಕೆ ವಲಯ ಕಚೇರಿಗೆ ತಲಾ 10 ಲಕ್ಷ ರೂ. ನೆರೆ ಪರಿಹಾರಕ್ಕೆ ಅನುದಾನ ಮೀಸಲಿಡಲಾಗುತ್ತಿತ್ತು. ಈಗ ಯಾವುದೇ ರೀತಿಯ ಅನುದಾನ ಮೀಸಲಿಟ್ಟಿಲ್ಲ. ಈ ಕುರಿತು ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳ ಜತೆಗೆ ಮಾತನಾಡಿದ್ದೇನೆ. ಅವರೂ ಕೂಡ ಆಯೋಗದ ಅನುಮತಿ ಕೋರುವ ವಿಷಯ ತಿಳಿಸಿದ್ದಾರೆ. ಅಧಿಕಾರಿಗಳ ಸಭೆ ಕರೆದು ಪರಿಹಾರ ಕಾರ್ಯ ನಡೆಸುವ ಕುರಿತು ಚರ್ಚಿಸುತ್ತೇನೆ. ಮಳೆಗಾಲ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಉದ್ಭವಿಸುತ್ತಿದೆ. ಶಾಶ್ವತ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸಲಾಗುವುದು ಎಂದರು.
    ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಮೀನಾಕ್ಷಿ ವಂಟಮೂರಿ, ಪ್ರಮುಖರಾದ ಶಶಿ ಡಂಗನವರ, ವಿಷ್ಣು, ವಿಲ್ಸನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts