ಗ್ರಂಥಾಲಯಗಳು ಜ್ಞಾನಾರ್ಜನೆಯ ಕೇಂದ್ರಗಳು

ವಿಜಯವಾಣಿ ಸುದ್ದಿಜಾಲ ಪಿರಿಯಾಪಟ್ಟಣ
ಗ್ರಂಥಾಲಯಗಳು ಜ್ಞಾನಾರ್ಜನೆಯ ಕೇಂದ್ರಗಳು ಎಂದು ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷ ಎನ್.ಆರ್ ಕಾಂತರಾಜು ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಸಾರ್ವಜನಿಕ ಗ್ರಂಥಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಓದುವ ತಿಂಗಳು ಕಾರ್ಯಕ್ರಮದಲ್ಲಿ ಮಾತನಾಡಿದರು.
ವೈಜ್ಞಾನಿಕ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಾಲ ಕಳೆಯುತ್ತಿರುವುದು ವಿಷಾದನೀಯ ಸಂಗತಿ. ಬಿಡುವಿನ ವೇಳೆಯಲ್ಲಿ ಗ್ರಂಥಾಲಯಕ್ಕೆ ಆಗಮಿಸಿ ವಿವಿಧ ಕ್ಷೇತ್ರಗಳ ಮಾಹಿತಿಯುಳ್ಳ ಪುಸ್ತಕಗಳನ್ನು ಓದುವುದರಿಂದ ಜ್ಞಾನಾರ್ಜನೆ ಹಾಗೂ ಸಾಮಾಜಿಕ ಜ್ಞಾನ ಹೆಚ್ಚಿಸಿಕೊಳ್ಳಬಹುದು. ಪ್ರತಿಯೊಬ್ಬರು ತಮ್ಮ ಬಿಡುವಿನ ವೇಳೆಯಲ್ಲಿ ದಿನಪತ್ರಿಕೆಗಳು ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಗ್ರಂಥಾಲಯ ಮೇಲ್ವಿಚಾರಕಿ ರೇವತಿ, ಸಹಾಯಕ ಶ್ರೀನಿವಾಸ್, ಓದುಗರರಾದ ಬಾಬು, ಶಿಲ್ಪಾ, ಶ್ರೀನಿವಾಸ್, ಸ್ವಾಮಿ, ನಾಗರಾಜ್ ಇತರರಿದ್ದರು.

Leave a Reply

Your email address will not be published. Required fields are marked *