20.4 C
Bangalore
Monday, December 9, 2019

ಗ್ರಾಪಂಗೆ ಇನ್ನೂ ಹಸ್ತಾಂತರವಾಗದ ಗ್ರಂಥಾಲಯ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಮಲ್ಲಿಕಾರ್ಜುನ ಕೊಚ್ಚರಗಿ ಹಾಸನ
ಗ್ರಂಥಾಲಯಗಳ ನಿರ್ವಹಣೆ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗೆ ವಹಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿ ಎರಡು ತಿಂಗಳಾದರೂ ಇಲ್ಲಿವರೆಗೆ ಹಸ್ತಾಂತರ ಕಾರ್ಯದಲ್ಲಿ ಯಾವುದೇ ಪ್ರಗತಿ ಕಂಡಿಲ್ಲ.
ಸಿಬ್ಬಂದಿ ಕೊರತೆ, ಓದುಗರ ನಿರಾಸಕ್ತಿ, ವೇತನ ಸಮಸ್ಯೆಯಿಂದ ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ಬಾಗಿಲು ಮುಚ್ಚುವ ಹಂತಕ್ಕೆ ತಲುಪಿದ್ದ ಗ್ರಂಥಾಲಯಗಳಿಗೆ ಮರುಜೀವ ಕಲ್ಪಿಸಬೇಕೆಂದು ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿತ್ತು. ಆದರೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಗ್ರಂಥಾಲಯ ನಿರ್ವಹಣೆ ಜವಾಬ್ದಾರಿ ಹೊರಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಿರಿಯ ಅಧಿಕಾರಿಗಳೊಂದಿಗೆ ಎರಡು ಸಭೆ ನಡೆಸಿದ್ದು, ಏ.25ರಂದು ಮತ್ತೊಂದು ಸಭೆ ಆಯೋಜಿಸಿದೆ. ರಾಜ್ಯ ಸರ್ಕಾರ ಮೊದಲು ಹೊರಡಿಸಿದ್ದ ಆದೇಶದನ್ವಯ ಗ್ರಂಥಾಲಯದ ಎಲ್ಲ ಮಾಹಿತಿಯನ್ನು ಜಿಲ್ಲಾ ಕೇಂದ್ರದ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

ಜಿಲ್ಲೆಯ ಎಲ್ಲೆಲ್ಲಿ ಗ್ರಂಥಾಲಯಗಳಿವೆ: ಹಾಸನ ನಗರದಲ್ಲಿ ಎರಡು ಗ್ರಂಥಾಲಯ ಸೇರಿ ಜಿಲ್ಲಾದ್ಯಂತ 260 ಗ್ರಂಥಾಲಯಗಳಿವೆ. ಅರಸೀಕೆರೆ ತಾಲೂಕಿನಲ್ಲಿ 45, ಆಲೂರು 15, ಅರಕಲಗೂಡು 29, ಚನ್ನರಾಯಪಟ್ಟಣ 40, ಹಾಸನ 40, ಹೊಳೆನರಸೀಪುರ 26, ಸಕಲೇಶಪುರ 26 ಹಾಗೂ ಬೇಲೂರು ತಾಲೂಕಿನಲ್ಲಿ 37 ಗ್ರಂಥಾಲಯಗಳಿವೆ. ಗ್ರಾಮಾಂತರ ಪ್ರದೇಶದ ಪ್ರತಿ ಗ್ರಂಥಾಲಯದಲ್ಲಿ 6 ಕನ್ನಡ ಹಾಗೂ ಎರಡು ಇಂಗ್ಲಿಷ್ ದಿನಪತ್ರಿಕೆಗಳಿರುತ್ತವೆ. ಆದರೆ ಕಾಯಂ ಸಿಬ್ಬಂದಿ ಇಲ್ಲದ ಕಾರಣ ಗ್ರಂಥಾಲಯ ಬಾಗಿಲು ತೆರೆಯುವುದು ಅಪರೂಪ ಎಂಬಂತಾಗಿದೆ. ಗ್ರಾಮೀಣ ಜನರೂ ಗ್ರಂಥಾಲಯ ಕಾರ್ಯನಿರ್ವಹಣೆ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಮಿತಿಮೀರಿದೆ ಸಿಬ್ಬಂದಿ ಸಮಸ್ಯೆ: ಗ್ರಂಥಾಲಯಗಳಿಗೆ ತಾತ್ಕಾಲಿಕ ಸಿಬ್ಬಂದಿ ನೇಮಿಸಿಕೊಂಡು ಕೆಲಸ ಮಾಡಿಕೊಳ್ಳಲಾಗುತ್ತಿದೆಯಾದರೂ ಹಾಸನ ನಗರದಲ್ಲಿ ಸಿಬ್ಬಂದಿ ಕೊರತೆ ಸಾಕಷ್ಟಿದೆ. ನಗರ ಕೇಂದ್ರ ಗ್ರಂಥಾಲಯದಲ್ಲಿ 13 ಹುದ್ದೆಗಳ ಪೈಕಿ 7 ಜನರು ಮಾತ್ರ ಕೆಲಸ ಮಾಡುತ್ತಿದ್ದಾರೆ. ಇನ್ನು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 25 ಜನರು ಮಾಡುವ ಕೆಲಸವನ್ನು ಇಬ್ಬರು ಮಾತ್ರ ನಿರ್ವಹಿಸುತ್ತಿದ್ದಾರೆ.

1.50 ಲಕ್ಷ ಪುಸ್ತಕಗಳು: ಹಾಸನ ನಗರ ಕೇಂದ್ರ ಗ್ರಂಥಾಲಯದಲ್ಲಿ 1.50 ಲಕ್ಷ ಪುಸ್ತಕಗಳಿದ್ದು, 13,500 ಜನರು ಸದಸ್ಯತ್ವ ಪಡೆದಿದ್ದಾರೆ. ಪ್ರತಿನಿತ್ಯ 300 ಜನರು ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರ ಸ್ಪಂದನೆ ಉತ್ತಮವಾಗಿದೆ. ಆದರೆ ಕಟ್ಟಡ ಶಿಥಿಲಾವಸ್ಥೆ ತಲುಪಿರುವುದು ಹಾಗೂ ಆಸನಗಳ ಸಂಖ್ಯೆ ಕಡಿಮೆ ಇರುವುದು ಓದುಗರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. 7.50 ಕೋಟಿ ರೂ. ವೆಚ್ಚದಲ್ಲಿ ಹೊಸ ಗ್ರಂಥಾಲಯ ಕಟ್ಟಡಕ್ಕೆ ಕ್ರಿಯಾ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದ್ದರೂ ಅನುದಾನ ಬಿಡುಗಡೆಯಾಗಿಲ್ಲ. ಗ್ರಂಥಾಲಯ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದ್ದ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ 1 ಕೋಟಿ ರೂ. ಅನುದಾನ ಕೊಡಿಸಿದ್ದರು. ಆದರೆ ಸರ್ಕಾರದಿಂದ ಪೂರ್ಣ ಅನುದಾನ ಸಿಗುವವರೆಗೆ ಕೆಲಸ ಪ್ರಾರಂಭಿಸುವುದಿಲ್ಲ ಎಂದು ಗ್ರಂಥಾಲಯ ಉಪನಿರ್ದೇಶಕರು ತಿಳಿಸಿದ್ದಾರೆ.

ಶತಮಾನೋತ್ಸವ ಆಚರಿಸಲಿಲ್ಲ: ಲಕ್ಷಾಂತರ ಜನರಿಗೆ ಅಕ್ಷರ ಜ್ಞಾನ ಕೊಟ್ಟ ನಗರ ಕೇಂದ್ರ ಗ್ರಂಥಾಲಯ ಸ್ಥಾಪನೆಯಾಗಿ ನೂರು ವರ್ಷ ಗತಿಸಿದರೂ ಶತಮಾನೋತ್ಸವ ಆಚರಿಸಲಿಲ್ಲ. 2017ರಲ್ಲಿಯೇ ನೂರು ವರ್ಷ ಪೂರೈಸಿದ ಕಟ್ಟಡಕ್ಕೆ ತನ್ನದೇಯಾದ ಇತಿಹಾಸವಿದೆ. ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಗ್ರಂಥಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದ ಎಚ್.ಎಸ್. ಅನಿಲ್‌ಕುಮಾರ್ ಶತಮಾನೋತ್ಸವ ಸಂಭ್ರಮಾಚರಣೆಗಾಗಿ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದ್ದರು. ಆದರೆ ಸರ್ಕಾರದಿಂದ ಅನುದಾನ ದೊರೆಯದ ಕಾರಣ ಸುಮ್ಮನಾದರು.

1891ರಲ್ಲಿ ಆಗಿನ ಜಿಲ್ಲಾಧಿಕಾರಿ ರಾಘವೇಂದ್ರರಾವ್ ಹಾಸನ ನಗರದಲ್ಲಿ ಗ್ರಂಥಾಲಯ ಪ್ರಾರಂಭಿಸಿದರು. 1891ರಲ್ಲಿ ಕಿಂಗ್ ಜಾರ್ಜ್ ವಿ. ಅವರ ಪಟ್ಟಾಭಿಷೇಕ ಮಹೋತ್ಸವ ಸ್ಮರಣಾರ್ಥ ಗ್ರಂಥಾಲಯ ಕಟ್ಟಡಕ್ಕೆ ಜಿಲ್ಲಾಧಿಕಾರಿ ಪಿ.ಆರ್.ಡಬ್ಲುೃ.ವೆದರಾಲ್ ಶಂಕುಸ್ಥಾಪನೆ ನೆರವೇರಿಸಿದರು. 1917ರಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡು ಪಬ್ಲಿಕ್ ಲೈಬ್ರರಿ ಆ್ಯಂಡ್ ರೀಡಿಂಗ್ ರೂಮ್ ಎಂಬ ಹೆಸರು ಪಡೆದು ಮೈಸೂರು ಸಂಸ್ಥಾನದ ದಿವಾನ್ ಡಾ.ಎಂ.ವಿಶ್ವೇಶ್ವರಯ್ಯ ಅವರಿಂದ ಉದ್ಘಾಟನೆಗೊಂಡಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಕೇಂದ್ರವಾಗಿದ್ದ ಕೇಂದ್ರ ಗ್ರಂಥಾಲಯ ಪ್ರಾಂಗಣದಲ್ಲಿ ಮಹಾತ್ಮ ಗಾಂಧೀಜಿ ಅವರು 1924ರಲ್ಲಿ ಸ್ವಾತಂತ್ರೃ ಚಳವಳಿಯ ಭಾಷಣ ಮಾಡಿದ್ದರು.
ಕನ್ನಡ ಸಾರಸ್ವತ ಲೋಕದ ಶ್ರೇಷ್ಠ ಸಾಹಿತಿಗಳಾದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ದ.ರಾ.ಬೇಂದ್ರೆ, ಗೋವಿಂದ ಪೈ, ವಿ.ಕೃ. ಗೋಕಾಕ್, ಡಾ. ಶಿವರಾಮ ಕಾರಂತ, ಅ.ನ.ಕೃ ಸೇರಿದಂತೆ ಅನೇಕರು ಇಲ್ಲಿಗೆ ಭೇಟಿ ನೀಡಿದ್ದಾರೆ.

ಗ್ರಾಮಾಂತರ ಪ್ರದೇಶದ ಗ್ರಂಥಾಲಯಗಳನ್ನು ಗ್ರಾಪಂಗೆ ವಹಿಸುವುದಾಗಿ ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ನಮ್ಮಿಂದ ಆಗಬೇಕಿರುವ ಕೆಲಸ ಮಾಡುತ್ತಿದ್ದೇವೆ. ಸರ್ಕಾರದ ಆದೇಶವನ್ನು ತಪ್ಪದೇ ಪಾಲಿಸುತ್ತೇವೆ. ಅನುದಾನ ಬಿಡುಗಡೆಯಾದ ತಕ್ಷಣವೇ ಕೇಂದ್ರ ಗ್ರಂಥಾಲಯದ ಕಟ್ಟಡ ಕಾಮಗಾರಿ ಕೈಗೊಳ್ಳಲಾಗುವುದು.
-ಸಿ.ಜೆ. ವೆಂಕಟೇಶ್, ನಗರ ಹಾಗೂ ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...