More

    ಲೈಸೆನ್ಸ ಹೊಂದುವುದು ಕಡ್ಡಾಯ

    ಅಥಣಿ : ಅಥಣಿ, ಕಾಗವಾಡ ಹಾಗೂ ರಾಯಬಾಗ ತಾಲೂಕಿನ ಕುಡಚಿ ವಿಧಾನಸಭಾ ಕ್ಷೇತ್ರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಥಣಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆರಂಭಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಪಟ್ಟಣದಲ್ಲಿ ಸೋಮವಾರ ನೂತನವಾಗಿ ಪ್ರಾರಂಭಗೊಂಡ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಅಥಣಿ, ಕಾಗವಾಡ ಮತ್ತು ರಾಯಬಾಗ ತಾಲೂಕಿನ ವಾಹನ ಮಾಲೀಕರು, ಸಾರ್ವಜನಿಕರು ಲೈಸನ್ಸ್‌ಗಾಗಿ ಚಿಕ್ಕೋಡಿಗೆ ತೆರಳಬೇಕಾಗುತ್ತಿತ್ತು. ಅದೇ ಕಾರಣಕ್ಕೆ ಅದೆಷ್ಟೋ ವಾಹನ ಮಾಲೀಕರು ಲೈಸನ್ಸ್ ಪಡೆಯದೆ ವಾಹನ ಚಲಾಯಿಸುತ್ತಿದ್ದರು. ಅಥಣಿಯಲ್ಲಿ ಎಆರ್‌ಟಿಒ ಕಚೇರಿ ಆರಂಭವಾಗಿದ್ದು, ಕಡ್ಡಾಯವಾಗಿ ಎಲ್ಲರೂ ಚಾಲನಾ ಪರವಾನಗಿ ಪಡೆದುಕೊಳ್ಳಬೇಕು ಎಂದರು.

    ಜವಳಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಕಾಗವಾಡದಲ್ಲಿ ಪ್ರಾರಂಭಿಸಬೇಕು ಎನ್ನುವ ಯೋಜನೆ ನಮ್ಮದಾಗಿತ್ತು, ಆದರೆ, ಸಾರಿಗೆ ಸಚಿವರು ಅಥಣಿ ಪಟ್ಟಣದಲ್ಲಿಯೇ ಕಚೇರಿ ಪ್ರಾರಂಭಿಸಿದ್ದಾರೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು. ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ವಾಹನಗಳ ನೋಂದಣಿಗಾಗಿ ಚಿಕ್ಕೋಡಿಗೆ ತೆರಳಬೇಕಾಗುತ್ತಿತ್ತು. ಇದರಿಂದ ವಾಹನ ಮಾಲೀಕರಿಗೆ ತೊಂದರೆ ಉಂಟಾಗುತ್ತಿತ್ತು. ಅದನ್ನು ತಪ್ಪಿಸಲು ಸಾರಿಗೆ ಸಚಿವರು ಅಥಣಿಯಲ್ಲಿ ಸಹಾಯಕ ಪ್ರಾದೇಶಿಕ ಅಧಿಕಾರಿಗಳ ಕಚೇರಿ ಪ್ರಾರಂಭಿಸಿದ್ದಾರೆ. ಸಾರ್ವಜನಿಕರು ಪ್ರಯೋಜನ ಪಡೆಯಬೇಕು ಎಂದರು.

    ಕುಡಚಿ ಶಾಸಕ ಪಿ.ರಾಜೀವ್ ಮಾತನಾಡಿದರು. ಸಾರಿಗೆ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತ ಜೆ.ಪುರುಷೋತ್ತಮ, ಅಥಣಿ ಸಾರಿಗೆ ಅಧಿಕಾರಿ ಆನಂದ ಪಾರ್ಥನಹಳ್ಳಿ ಸೇರಿ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts