ಸ್ಕೌಟ್ಸ್ ಗೈಡ್ಸ್‌ನಿಂದ ಜೀವನ ಶಿಕ್ಷಣ: ಹರೀಂದ್ರ ಸುವರ್ಣ ಅಭಿಪ್ರಾಯ

Mul_Scouts
Published on

ಮೂಲ್ಕಿ: ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಶಿಸ್ತು, ಸಂಸ್ಕಾರದ ಗುಣಗಳು ಮತ್ತು ಪ್ರಾಮಾಣಿಕತೆ ತಿಳಿಸಿ ಸಮಾಜದೊಂದಿಗೆ ಬೆರೆಯುವ ಜೀವನ ಶಿಕ್ಷಣ ನೀಡುವಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆಂದೋಲನ ಸಹಕಾರಿಯಾಗಿದೆ ಎಂದು ಮೂಲ್ಕಿ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಗಳ ಸಂಚಾಲಕ ಹರೀಂದ್ರ ಸುವರ್ಣ ಹೇಳಿದರು.

ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯಲ್ಲಿ ರೋವರ್ಸ್‌- ರೇಂಜರ್ಸ್‌ ಹಾಗೂ ಬನ್ನೀಸ್ ಘಟಕಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮೂಲ್ಕಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ.ಸರ್ವೋತ್ತಮ ಅಂಚನ್ ಉದ್ಘಾಟಿಸಿದರು. ಶಾಲಾಡಳಿತದ ಕಾರ್ಯದರ್ಶಿ ಬಾಲಚಂದ್ರ ಸನಿಲ್ ಮಾತನಾಡಿದರು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಪ್ರತಿಮ್ ಕುಮಾರ್ ಹಾಗೂ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಸ್ಕೌಟ್ ಅಂದೋಲನದ ವಿವಿಧ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಸಂಸ್ಥೆ ಆಡಳಿತಾಧಿಕಾರಿ ಮಂಜುಳಾ, ಆಡಳಿತ ಸಮಿತಿ ಸದಸ್ಯ ಯೋಗೀಶ್ ಕೋಟ್ಯಾನ್, ನಾರಾಯಣಗುರು ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಗೀತಾ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲ ಯತೀಶ್ ಅಮೀನ್ ಸ್ವಾಗತಿಸಿದರು. ಸ್ಕೌಟ್ಸ್ ಶಿಕ್ಷಕ ರಮೇಶ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net