More

    ಸಂಸ್ಕಾರ ಮರೆಯಾಗುತ್ತಿರುವುದರಿಂದ ಜೀವನ ಕಷ್ಟ

    ಪಾಂಡವಪುರ: ಜನರು ಮೂಲ ಸಂಸ್ಕೃತಿ ಮತ್ತು ಸಂಸ್ಕಾರ ಮರೆಯುತ್ತಿರುವ ಕಾರಣ ಜೀವನದಲ್ಲಿ ಕಷ್ಟ, ಕಾರ್ಪಣ್ಯಗಳು ಹೆಚ್ಚಾಗುತ್ತಿದೆ ಎಂದು ಧರ್ಮಸ್ಥಳ ಸಂಸ್ಥೆಯ ಜನಜಾಗೃತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಮಾಧವ ನಾಯಕ್ ಅಭಿಪ್ರಾಯಪಟ್ಟರು.

    ಪಟ್ಟಣದ ಕಸಾಪ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿ.ಸಿ ಟ್ರಸ್ಟ್, ಮೇಲುಕೋಟೆ ಯೋಜನಾ ಕಚೇರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ನವಜೀವನ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ ಮಂಜುನಾಥಸ್ವಾಮಿಗೆ ಸಹಸ್ರ ಬಿಲ್ವಾರ್ಚನೆ ಮತ್ತು ನವಜೀವನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಾಲಕರು ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸದಿದ್ದರೆ ಮಕ್ಕಳು ದಾರಿ ತಪ್ಪುತ್ತಾರೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಹೇಳಿದರು.

    ತಾಂತ್ರಿಕತೆಯ ಜತೆಗೆ ಮನುಷ್ಯ ವೇಗವಾಗಿ ಬದಲಾವಣೆಯಾಗುತ್ತಿದ್ದಾನೆ. ಅಷ್ಟೇ ವೇಗವಾಗಿ ದುಶ್ಚಟಕ್ಕೆ ಬಲಿಯಾಗುತ್ತಿದ್ದಾನೆ. ಒಳ್ಳೆಯ ಚಿಂತನೆಯ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಅಶ್ವಥ್‌ಕುಮಾರೇಗೌಡ, ಸದಸ್ಯ ರಾಜ್‌ಕುಮಾರ್, ದೀಪು, ಧನಂಜಯ, ಸಂಸ್ಥೆಯ ಯೋಜನಾಧಿಕಾರಿ ಸರೋಜಾ, ಪವಿತ್ರಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts