22.5 C
Bengaluru
Sunday, January 19, 2020

ಗೀತಾ ತತ್ವದಿಂದ ಜೀವನ ಧನ್ಯ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಧಾರವಾಡ: ಸಾಮಾಜಿಕ ಸಾಮರಸ್ಯ, ರಾಷ್ಟ್ರೀಯ ಭಾವೈಕ್ಯ, ವ್ಯಕ್ತಿತ್ವ ವಿಕಸನ ಹಾಗೂ ನೈತಿಕತೆ ಪುನರುತ್ಥಾನದ ಧ್ಯೇಯಗಳನ್ನಿಟ್ಟುಕೊಂಡು ಶ್ರೀ ಭಗವದ್ಗೀತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸರ್ವರೂ ಪಾಲ್ಗೊಂಡು ಗೀತೆಯ ತತ್ತ್ವಗಳನ್ನು ಅಳವಡಿಸಿಕೊಳ್ಳುವುದರಿಂದ ಜೀವನದಲ್ಲಿ ಶ್ರೇಯಸ್ಸು ಕಾಣಬಹುದು ಎಂದು ಸ್ವರ್ಣವಲ್ಲೀ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.

ನಗರದ ಮಾಳಮಡ್ಡಿಯ ಪ್ರಲ್ಹಾದ ವಿದ್ಯಾರ್ಥಿ ನಿಲಯದಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಶ್ರೀ ಭಗವದ್ಗೀತಾ ಅಭಿಯಾನದಲ್ಲಿ ಪಾಲ್ಗೊಳ್ಳುವ ಉಪನ್ಯಾಸಕರಿಗಾಗಿ ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಆಶೀರ್ವಚನ ನೀಡಿದರು.

ಒತ್ತಡದ ಜೀವನದಿಂದ ಆತ್ಮಹತ್ಯೆ, ಕಾಯಿಲೆಗಳು ಹೆಚ್ಚುತ್ತಿವೆ. ವಿದ್ಯಾರ್ಥಿಗಳು, ಐಟಿ- ಬಿಟಿ ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಜೀವನದಲ್ಲಿ ಸೋತೆ ಎಂದುಕೊಂವರಿಗೆ ಜೀವನ ವಿಧಾನ ಕಲಿಸಿದಿದ್ದರೆ ಆತ್ಮಹತ್ಯೆಯ ಸಂಖ್ಯೆ ಹೆಚ್ಚಳವಾಗುವ ಅಪಾಯವಿದೆ. ಜೀವನ ವಿಧಾನ ಕಲಿಕೆಗೆ ಭಗವದ್ಗೀತೆಗಿಂತ ಉತ್ತಮ ಕೈಪಿಡಿ ಮತ್ತೊಂದಿಲ್ಲ ಎಂದರು.

ಇಂದು ದೇಶದ ಉದ್ದಗಲಕ್ಕೂ ನೈತಿಕತೆಯ ಪತನವಾಗುತ್ತಿದೆ. ಯೋಜನೆಗಳ ಅನುಷ್ಠಾನದಲ್ಲಿ ಪರ್ಸೆಂಟೇಜ್ ವ್ಯವಸ್ಥೆ ಯಾವ ಸರ್ಕಾರ ಬಂದರೂ ಬದಲಾಗದು. ಅಪರಾಧ ಚಟುವಟಿಕೆ ಹೆಚ್ಚುತ್ತಿದ್ದು, ಇವನ್ನೆಲ್ಲ ತಡೆಯಲು ಆಧ್ಯಾತ್ಮಿಕ ಹಿನ್ನೆಲೆಯ ನೈತಿಕತೆ ಕಲಿಸಬೇಕಿದೆ. ಸುಶಿಕ್ಷಿತರೇ ಆತಂಕವಾದದಲ್ಲಿ ತೊಡಗುತ್ತಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಭಾವೈಕ್ಯದ ಬುನಾದಿಯ ಕೊರತೆಯೇ ಇದಕ್ಕೆ ಕಾರಣ. ಸರ್ಕಾರ ರಚಿಸುವ ಪಠ್ಯಕ್ರಮದಲ್ಲಿ ಆಧ್ಯಾತ್ಮಿಕತೆ, ನೈತಿಕತೆ ಸೇರಬೇಕು. ಮಕ್ಕಳಿದ್ದಾಗಲೇ ಭಗವದ್ಗೀತೆಯ ಸಾರ ತಿಳಿಸಿದರೆ ಭಯೋತ್ಪಾದಕರಾಗುವುದನ್ನು ತಡೆಗಟ್ಟಬಹುದು ಎಂದರು.

ಕಾರ್ಯಾಗಾರ ಉದ್ಘಾಟಿಸಿದ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಎಂ.ಎ. ಹೆಗಡೆ ಮಾತನಾಡಿ, ಗೀತೆಯ ಅರ್ಥಾನುಸಂಧಾನದಿಂದ ಲೌಕಿಕ ಬದುಕಿಗೆ ನೆಮ್ಮದಿ ಸಾಧ್ಯ. ನಮ್ಮ ಯುವ ಪೀಳಿಗೆಗೆ ಗೀತೆಯ ಮಹತ್ವ ತಿಳಿಸಿ, ಮುಂದುವರಿಸುವ ಪ್ರಯತ್ನ ಆಗಬೇಕು. ಈ ದಿಶೆಯಲ್ಲಿ ಶ್ರೀಗಳು ಚಳವಳಿಯ ರೂಪದಲ್ಲಿ ಗೀತಾ ಅಭಿಯಾನ ನಡೆಸುತ್ತಿದ್ದಾರೆ. ಇದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವ ಮೂಲಕ ಶ್ರೀಕೃಷ್ಣನ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದರು.

ಸಂಚಾಲಕ ಜಿ.ಆರ್. ಭಟ್ ಸ್ವಾಗತಿಸಿದರು. ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ರಾಜು ಪಾಟೀಲಕುಲಕರ್ಣಿ, ಭಗವದ್ಗೀತಾ ಅಭಿಯಾನದ ಅಧ್ಯಕ್ಷ ಆರ್.ಡಿ. ಕುಲಕರ್ಣಿ, ಜಿ.ಕೆ. ಹೆಗಡೆ, ರಾಧಾ ದೇಸಾಯಿ, ಶಾರದಾ ಮಹಿಳಾ ಮಂಡಳ ಹಾಗೂ ಪ್ರಹ್ಲಾದ ವಿದ್ಯಾರ್ಥಿ ನಿಲಯದ ಟ್ರಸ್ಟಿ ಕೆ.ಆರ್. ದೇಶಪಾಂಡೆ, ಇತರರಿದ್ದರು. ನಂತರ ಡಾ. ಶ್ರೀರಾಮ ಭಟ್ ಹಾಗೂ ಇತರರು ಉಪನ್ಯಾಸ ನೀಡಿದರು.

ಸಮಸ್ಯೆಗಳಿಗೆ ಸ್ಪಂದಿಸಿ: ಹುಬ್ಬಳ್ಳಿಯ 10 ವಲಯ ಸಮಿತಿ ಹಾಗೂ ಧಾರವಾಡದ 7 ಸಮಿತಿಗಳು ಜಿಲ್ಲೆಯಾದ್ಯಂತ 1 ಸಾವಿರ ಭಗವದ್ಗೀತೆ ಅಭಿಯಾನ ಕಾರ್ಯಕ್ರಮಗಳನ್ನು ಆಯೋಜಿಸಬೇಕು. 100ಕ್ಕೂ ಹೆಚ್ಚು ಉಪನ್ಯಾಸಕರು ಭಾಗಿಯಾಗಬೇಕು. ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಗೆ ಉಪನ್ಯಾಸದ ಮೂಲಕ ಸ್ಪಂದಿಸಬೇಕು. ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳದೇ ಸಮಸ್ಯೆಯನ್ನು ನೋಡುವ ದೃಷ್ಟಿಕೋನ ಬದಲಿಸುವ ಕಾರ್ಯ ಮಾಡಬೇಕು ಎಂದು ಸ್ವರ್ಣವಲ್ಲೀ ಶ್ರೀಗಳು ಹೇಳಿದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...