

ವಿಜಯಪುರ : ಮಾದಕ ವಸ್ತುಗಳ ದಾಸರಾಗುವುದರಿಂದ ಜೀವನವೇ ಸರ್ವ ನಾಶವಾಗಲಿದೆ. ವಿದ್ಯಾರ್ಥಿ ಜೀವನದಿಂದಲೇ ನಶೆ ಪದಾರ್ಥಗಳ ವಿರುದ್ಧ ಎಚ್ಚರಿಕೆ ವಹಿಸುವ ಜತೆಗೆ ಸದಾ ಜಾಗೃತರಾಗಿರಬೇಕು ಎಂದು ಪ್ರಾಚಾರ್ಯ ಹೇಮಂತ ಕೃಷ್ಣ ಎಚ್ಚರಿಕೆ ನೀಡಿದರು.ತಾಲೂಕಿನ ಕವಲಗಿ ಗ್ರಾಮದ ಸಂಗನಬಸವ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೋಂಡಿದ್ದ ನಶಾ ಪದಾರ್ಥಗಳ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕವಲಗಿ ಗ್ರಾಮದ ಸಂಗನ ಬಸವ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ನಶಾ ಪದಾರ್ಥಗಳ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.