More

    ಮಾನವೀಯತೆ ಮರೆತರೆ ಜೀವನ ವ್ಯರ್ಥ

    ಚಿತ್ರದುರ್ಗ: ಮಾನವೀಯತೆ ಮರೆತರೆ ಜೀವನ ವ್ಯರ್ಥ, ಮೊದಲು ಮಾನವರಾಗಿ ನಾವೆಲ್ಲರೂ ಬಾಳ ಬೇಕಿದೆ ಎಂದು ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಹೇಳಿದರು.
    ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ಬುಧವಾರ ಸಿಬಿಎಸ್‌ಇ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಪ್ರಗತಿ ಪಥಂ’ ಉದ್ಘಾಟಿಸಿ ಮಾತನಾಡಿ, ಮಾನವೀಯ ಗುಣಗಳನ್ನು ಮರೆಯದೆ ಜೀವನದಲ್ಲಿ ಅಳವಡಿಸಿಕೊಂಡು ಬಾಳಬೇಕು ಎಂದರು.

    ಉತ್ತಮ ಸಂಸ್ಕಾರ, ಉನ್ನತ ಶಿಕ್ಷಣದೊಂದಿಗೆ ಜೀವನದಲ್ಲಿ ಯಶಸ್ಸು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ 10 ವರ್ಷ ಕಷ್ಟಪಟ್ಟರೆ ಜೀವನ ಪೂರ್ತಿ ಸುಖವಾಗಿರಬಹುದು. ಕ್ರಮಬದ್ಧ ಅಭ್ಯಾಸ, ಶಿಸ್ತುಬದ್ಧ ಜೀವನ ತಮ್ಮದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
    ಬಸವೇಶ್ವರ ವೈದ್ಯಕೀಯ ಕಾಲೇಜು ಸಹ ಪ್ರಾಧ್ಯಾಪಕ ಡಾ.ಎಚ್.ಟಿ.ತೇಜಸ್ವಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲು ಹೆಚ್ಚಿನ ಜವಾಬ್ದಾರಿಯಿಂದ ಅಭ್ಯಾಸ ಮಾಡಬೇಕು ಎಂದು ಹೇಳಿದರು.

    ಎಸ್‌ಆರ್‌ಎಸ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಸಮಾಜದಲ್ಲಿ ನಮ್ಮನ್ನು ತಾವು ಹೇಗೆ ಗುರುತಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿದ್ಯಾರ್ಥಿ ದಿಸೆಯಲ್ಲೇ ನಿರ್ಧರಿಸಬೇಕು. ಮಕ್ಕಳ ವಿದ್ಯಾಭ್ಯಾಸ, ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಪಾಲಕರ ಪಾತ್ರವೂ ಹಿರಿದಾಗಿದೆ ಎಂದರು.
    ಸಂಸ್ಥೆ ಕಾರ್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಾಕ್ಷ ಬಿ.ಎಲ್.ಅಮೋಘ್, ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ, ಪ್ರಾಚಾರ‌್ಯ ಎಂ.ಎಸ್.ಪ್ರಭಾಕರ, ಶೈಕ್ಷಣಿಕ ಸಂಯೋಜಕ ಬಿ.ವಿ.ರಾಕೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts