ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್​ ಅಧಿಕಾರಿಗೇ ಕೊಲೆ ಬೆದರಿಕೆ; ಹಣ ಮಂಜೂರು ಮಾಡುವಂತೆ ಧಮ್ಕಿ..

Kumar
ಆರೋಪಿ ಕುಮಾರ್
Published on

ಬೆಂಗಳೂರು: ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್​ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿದ್ದಲ್ಲದೆ, ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲನ್ನೇರಿದೆ. ಟಿ. ಕುಮಾರ್ ಮತ್ತು ಇತರರ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮೀ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಎಸ್​ ಅಧಿಕಾರಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ. ನಾಗರಾಜಪ್ಪ ಅವರು ಈ ದೂರು ನೀಡಿರುತ್ತಾರೆ. ಮಹಾಲಕ್ಷ್ಮಿ ಬಡಾವಣೆಯ ಭೋವಿಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸೆ.17ರಂದು ಈ ಘಟನೆ ನಡೆದಿದೆ.

ಸರ್ಕಾರಿ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿದ ಇವರು ತಮಗೆ ಬೇಕಾದ ವ್ಯಕ್ತಿಗೆ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿದ್ದಾರೆ. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು, ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ ದೊಂಬಿ ಎಬ್ಬಿಸುತ್ತೇವೆ. ಸರ್ಕಾರಿ ಕಚೇರಿಗೆ ಬೆಂಕಿ ಇಟ್ಟು ಕೊಲೆ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net