More

    ಪ್ರವಾಸದಿಂದ ವಿದ್ಯಾರ್ಥಿಗಳಿಗೆ ಶಾಶ್ವತ ಕಲಿಕೆ

    ಕೆ.ಆರ್.ಪೇಟೆ : ಪಠ್ಯಕ್ಕೆ ಪೂರಕವಾದ ಹಾಗೂ ನೈಜ ಅನುಭವಗಳನ್ನು ನೀಡುವ ಶೈಕ್ಷಣಿಕ ಪ್ರವಾಸಗಳು ವಿದ್ಯಾರ್ಥಿಗಳಿಗೆ ಶಾಶ್ವತ ಕಲಿಕೆಯನ್ನು ಉಂಟುಮಾಡುತ್ತವೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.

    ಪಟ್ಟಣದ ಕೆಪಿಎಸ್ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಕರ್ನಾಟಕ ದರ್ಶನ ಶಾಲಾ ಮಕ್ಕಳ ಪ್ರವಾಸದ ಬಸ್ಸುಗಳಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

    ಸರ್ಕಾರ ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಪ್ರತಿವರ್ಷ ಕೋಟ್ಯಂತರ ರೂ.ಖರ್ಚು ಮಾಡುತ್ತಿದೆ, ಅದರ ಪ್ರಯೋಜನಗಳನ್ನು ನಾವೆಲ್ಲರೂ ಪಡೆದುಕೊಳ್ಳಬೇಕು. ಪ್ರತಿದಿನ ಶಾಲಾ ಕೊಠಡಿಯೊಳಗೆ ಕುಳಿತು ಪಾಠ ಕೇಳುವ ನಿಮಗೆ ಕರ್ನಾಟಕದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಪ್ರವಾಸಿ ಕೇಂದ್ರಗಳಾದ ಹಂಪೆ, ಚಿತ್ರದುರ್ಗ, ತುಂಗಭದ್ರಾ ಅಣೆಕಟ್ಟು, ಗೋಕರ್ಣ, ಮುರುಡೇಶ್ವರ, ಬೇಲೂರು, ಹಳೆಬೀಡು, ಶ್ರವಣಬೆಳಗೊಳ ಮುಂತಾದ ಪ್ರವಾಸಿ ತಾಣಗಳಿಗೆ ಕರೆದೊಯ್ಯಲಾಗುತ್ತಿದ್ದು ಸಮುದ್ರ, ದೇಗುಲಗಳು ಮತ್ತು ಕರ್ನಾಟಕದ ಚರಿತ್ರೆಯನ್ನು ತಿಳಿಸುವ ಸ್ಥಳಗಳಿಗೆ ಭೇಟಿ ನೀಡಿ ಇಲ್ಲಿನ ವಾಸ್ತವಾಂಶ, ನೈಜ ಸನ್ನಿವೇಶಗಳನ್ನು ವೀಕ್ಷಿಸುವುದರಿಂದ ಕಲಿಕೆಗೆ ಪರೋಕ್ಷವಾಗಿ ಸಹಕಾರಿಯಾಗಲಿದೆ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ಮಾತನಾಡಿ, ತಾಲೂಕಿನ ಎಲ್ಲ ಪ್ರೌಢಶಾಲೆಗಳ ತೊಂಭತ್ತೆರಡು ಮಕ್ಕಳು ಪ್ರವಾಸದಲ್ಲಿ ಭಾಗವಹಿಸುತ್ತಿದ್ದು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಉತ್ತಮ ಊಟ, ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತದೆ. ಮಾರ್ಗದರ್ಶಕ ಶಿಕ್ಷಕರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ ಎಲ್ಲ ಸ್ಥಳಗಳನ್ನು ವೀಕ್ಷಿಸಿ ಸುರಕ್ಷಿತವಾಗಿ ಮರಳಬೇಕು ಎಂದರು.

    ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ.ಮಂಜುನಾಥ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು, ಶಿಕ್ಷಣ ಸಂಯೋಜಕ ಜ್ಞಾನೇಶ್, ಮುಖ್ಯಶಿಕ್ಷಕರಾದ ಮುತ್ತುರಾಜ್, ಬಿ.ಆರ್.ವೆಂಕಟೇಶ್, ಹಮೀದ್, ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಸ್.ಆರ್.ಆನಂದ್‌ಕುಮಾರ್, ತಾಲೂಕು ಎಸ್ಸಿಎಸ್ಟಿ ನೌಕರರ ಸಂಘದ ಅಧ್ಯಕ್ಷ ಕಟ್ರಯೋಗೇಶ್, ಪ್ರೌಢಶಾಲಾ ಬಡ್ತಿ ಸಹಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್, ಸುಂದರೇಶ್ ಹಾಗೂ ತಾಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts