

ಅಮೆರಿಕ: ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್, 'ರನ್ ಮಷಿನ್', ದಾಖಲೆಗಳ ಸರದಾರ, ವಿರಾಟ್ ಕೊಹ್ಲಿ ಅವರ ಪ್ರತಿಮೆಯನ್ನು ಇದೀಗ ಅಮೆರಿಕಾದ ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ನಲ್ಲಿ ಅನಾವರಣಗೊಳಿಸಲಾಗಿದೆ. ಪ್ರಸ್ತುತ 2024ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಭಾಗವಾಗಿದ್ದಾರೆ.
ಇದನ್ನೂ ಓದಿ: ಜಯದೇವಿತಾಯಿ ಕರುನಾಡ ಸಾಂಸ್ಕೃತಿಕ ರಾಯಭಾರಿ
ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ವಿರಾಟ್, ಕಳೆದ ಒಂದೂವರೆ ದಶಕದಿಂದ ಕ್ರಿಕೆಟ್ ಜಗತ್ತಿನಲ್ಲಿ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿದ್ದಾರೆ. ವಿಶಿಷ್ಟ ಬ್ಯಾಟಿಂಗ್ ವೈಖರಿ ಹಾಗೂ ಕ್ರೀಡಾಸ್ಫೂರ್ತಿ ತೋರುವ ಮಾಜಿ ಕ್ಯಾಪ್ಟನ್ ಕೊಹ್ಲಿ, ಅತೀ ಹೆಚ್ಚು ರನ್ಗಳನ್ನು ದಾಖಲಿಸುವ ಮೂಲಕ ಕ್ರಿಕೆಟ್ ದಿಗ್ಗಜರು ಮಾಡಿರುವ ರೆಕಾರ್ಡ್ಗಳನ್ನು ಮುರಿದು, ತಮ್ಮದೇ ಹೊಸ ದಾಖಲೆಯನ್ನು ಬರೆಯುತ್ತಿರುವ ವಿರಾಟ್ಗೆ ಅಭಿಮಾನಿಗಳು ಪ್ರೀತಿಯಿಂದ ಕಿಂಗ್ ಕೊಹ್ಲಿ ಎಂದು ಕರೆಯುತ್ತಾರೆ.
ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಅತಿಥ್ಯ ವಹಿಸಿರುವ ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ಪೈಕಿ ನ್ಯೂಯಾರ್ಕ್ನ ಟೈಮ್ಸ್ ಸ್ಕ್ವೇರ್ನಲ್ಲಿ ಜಾಗತಿಕ ಮಟ್ಟದಲ್ಲಿ ಕ್ರಿಕೆಟ್ ಐಕಾನ್ ಎಂದು ಗುರುತಿಸಿಕೊಂಡಿರುವ ವಿರಾಟ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಪ್ರತಿಮೆಯ ಫೋಟೋ, ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
ಇದನ್ನೂ ಓದಿ: ಕಲಿಕೆಗೆ ಅಗತ್ಯ ವಾತಾವರಣ ನಿರ್ಮಿಸಲಿ
ಸದ್ಯ ಈ ವಿಷಯ ವೈರಲ್ ಆಗುತ್ತಿದ್ದಂತೆ ಥ್ರಿಲ್ ಆದ ಕ್ರಿಕೆಟ್ ಅಭಿಮಾನಿಗಳು, 'ಅದಕ್ಕೆ ಹೇಳೋದು, ಒಂದು ಬಾರಿ ಕಿಂಗ್ ಅಂದಮೇಲೆ ಅವರು ಕಿಂಗ್ ಆಗಿಯೇ ಇರುತ್ತಾರೆ'. 'ವಿರಾಟ್ಗೆ ಸರಿಸಾಟಿ ಯಾರು ಇಲ್ಲ' ಎಂದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಅಭಿಪ್ರಾಯಿಸಿದ್ದಾರೆ,(ಏಜೆನ್ಸೀಸ್).